ನೆಲಮಂಗಲ:- ನೆಲಮಂಗಲ ಬಳಿಯ ಬಾಲಾಜಿ ಫಾರಂ ಹೌಸ್ನಲ್ಲಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರಿನ ಆಟೋ ನಾಗ್ (32) ಕೊಲೆಯಾದ ವ್ಯಕ್ತಿಯಾಗಿದ್ದು, ಈತನ ವಿರುದ್ಧ ಲಗ್ಗೆರೆ ಹಾಗೂ ಹುಲಿಯೂರು ದುರ್ಗ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟ್ ಓಪನ್ ಆಗಿತ್ತು. ಬಾಲಾಜಿ ಫಾರಂ ಹೌಸ್ನ ರೂಮ್ನಲ್ಲೇ ಈ ಭೀಕರ ಕೊಲೆ ನಡೆದಿದ್ದು, ಹತ್ಯೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಪ್ರಕರಣದ ಮಾಹಿತಿ ತಿಳಿದ ತಕ್ಷಣ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.



