ಹಾಸನ:– ರೌಡಿಶೀಟರ್ ಓರ್ವ ವಾಟರ್ಮ್ಯಾನ್ಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಜಿಲ್ಲೆಯ ಚೀಕನಹಳ್ಳಿ ಗ್ರಾಮದಲ್ಲಿ ಜರುಗಿದೆ.
Advertisement
ಕೊಲೆಯಾದ ವ್ಯಕ್ತಿಯನ್ನು 27 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಚೀಕನಹಳ್ಳಿ ಗ್ರಾಮದಲ್ಲಿ ವಾಟರ್ಮ್ಯಾನ್ ಆಗಿದ್ದ ಗಣೇಶ್, ನಿನ್ನೆ ರಾತ್ರಿ ಗ್ರಾಮದ ಆಟೋ ನಿಲ್ದಾಣದ ಬಳಿ ನಿಂತಿದ್ದ. ಈ ವೇಳೆ ಕಂಠ ಪೂರ್ತಿ ಕುಡಿದು ಸ್ಥಳಕ್ಕೆ ಬಂದಿದ್ದ ರೌಡಿಶೀಟರ್ ಮಧು ಕ್ಷುಲ್ಲಕ ಕಾರಣಕ್ಕೆ ಗಣೇಶ್ ಜೊತೆ ಜಗಳ ತೆಗೆದಿದ್ದಾನೆ. ಬಳಿಕ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ.
ಬಳಿಕ ಆರೋಪಿ ಚಾಕು ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹತ್ಯೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿದ್ದಾರೆ.