ಬೆಂಗಳೂರು:- ಜೈಲಲ್ಲಿ ಕೈದಿಗಳಿಗೆ ರಾಜಾತೀಥ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿಗೆ ಮುಖ್ಯ ಅಧೀಕ್ಷರಾಗಿ ಅಂಶುಕುಮಾರ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯ ಅಧೀಕ್ಷಕ ಸುರೇಶ್ರನ್ನ ವರ್ಗಾವಣೆ ಮಾಡಿರುವ ಸರ್ಕಾರ, ಆ ಜಾಗಕ್ಕೆ ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡುವುದಾಗಿ ತಿಳಿತ್ತು. ಇದೀಗ ಹೊಸ ಮುಖ್ಯ ಅಧೀಕ್ಷರ ನೇಮಕವಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಂಶುಕುಮಾರ್ರನ್ನು ನೇಮಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದು ಕಾರಾಗೃಹ ಇಲಾಖೆ ಎಡಿಜಿಪಿ ಬಿ. ದಯಾನಂದ್ ಅನುಪಸ್ಥಿತಿಯಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮಾಡಿದ್ದರು. ವೈರಲ್ ಆಗಿರುವ ಫೋಟೋ, ವಿಡಿಯೋಗಳನ್ನೇ ತೋರಿಸಿ ಜೈಲು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರನ್ನ ಸಸ್ಪೆಂಡ್ ಮಾಡಲಾಗಿದೆ.
ಕಾರಾಗೃಹ ಮುಖ್ಯ ಅಧೀಕ್ಷಕ ಸುರೇಶ್ರನ್ನ ತಕ್ಷಣಕ್ಕೆ ಎತ್ತಂಗಡಿ ಮಾಡಿರುವ ಸರ್ಕಾರ, ಕಾರಾಗೃಹ ಸೂಪರಿಂಟೆಂಡೆಂಟ್ ಇಮಾಮ್ಸಾಬ್ ಮ್ಯಾಗೇರಿ ಮತ್ತು ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿಯನ್ನ ಸಸ್ಪೆಂಡ್ ಮಾಡಲಾಗಿದೆ.



