HomeKarnataka Newsಕಾರವಾರಕ್ಕೆ 100 ಕೋಟಿ ರೂ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಸಂಪುಟ ಗ್ರೀನ್ ಸಿಗ್ನಲ್

ಕಾರವಾರಕ್ಕೆ 100 ಕೋಟಿ ರೂ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಸಂಪುಟ ಗ್ರೀನ್ ಸಿಗ್ನಲ್

For Dai;y Updates Join Our whatsapp Group

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳೊಂದಿಗೆ ಮುಕ್ತಾಯಗೊಂಡಿದೆ. ಆರೋಗ್ಯ, ಶಿಕ್ಷಣ, ನೀರಾವರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಉತ್ತರ ಕನ್ನಡ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿಯೂ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ಓದಿ 10ನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ 500 ವಿದ್ಯಾರ್ಥಿಗಳಿಗೆ ಉಚಿತ ವಸತಿ ಸಹಿತ ಪಿಯುಸಿ ಶಿಕ್ಷಣ ಹಾಗೂ NEET, JEE, CET ಪರೀಕ್ಷಾ ಪೂರ್ವ ತರಬೇತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಗೆ 15 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ.

ಇನ್ನೊಂದೆಡೆ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯಡಿ 53 ಸರ್ಕಾರಿ ಪದವಿ ಕಾಲೇಜುಗಳು, 14 ಪಾಲಿಟೆಕ್ನಿಕ್ ಕಾಲೇಜುಗಳು ಹಾಗೂ ಐದು ಉತ್ಕೃಷ್ಟತಾ ಕೇಂದ್ರಗಳಿಗೆ ಒಟ್ಟು 802 ಕೋಟಿ ರೂಪಾಯಿ ಮೌಲ್ಯದ ವಸ್ತುಗಳ ಖರೀದಿಗೆ ಅನುಮೋದನೆ ದೊರೆತಿದೆ.

ಆರೋಗ್ಯ ಕ್ಷೇತ್ರದಲ್ಲಿ ನಗರ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್‌ಗಳು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಅಗತ್ಯ ಉಪಕರಣ ಮತ್ತು ಡಿಜಿಟಲೀಕರಣ ಕಾಮಗಾರಿಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ಹಾಗೂ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ತಲಾ 50 ಹಾಸಿಗೆಗಳ ಎಂಸಿಎಚ್ ಆಸ್ಪತ್ರೆ ನಿರ್ಮಾಣಕ್ಕೂ ಸಂಪುಟ ಅನುಮೋದನೆ ನೀಡಿದೆ.

ನೀರಾವರಿ ಹಾಗೂ ಅಭಿವೃದ್ಧಿ ಯೋಜನೆಗಳಿಗೂ ಒಪ್ಪಿಗೆ ದೊರೆತಿದ್ದು, ರಾಯಚೂರು ಜಿಲ್ಲೆಯ ಮಟಮಾರಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ 182.70 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ದಾಸನಕೆರೆ ಅಭಿವೃದ್ಧಿ ಕಾಮಗಾರಿಗಳು, ಮೈಸೂರು ಜಿಲ್ಲೆಯ ಕಬಿನಿ ನದಿಗೆ ವಿಯರ್ ನಿರ್ಮಾಣ, ಜೋಯಿಡಾ ತಾಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.

ಇದಲ್ಲದೆ, ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಕೇಂದ್ರ ಕಾರಾಗೃಹದ ಆವರಣದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ವತಿಯಿಂದ ಪೆಟ್ರೋಲ್ ಬಂಕ್ ಮತ್ತು ಮಾರಾಟ ಮಳಿಗೆ ಸ್ಥಾಪಿಸಲು ಕೂಡ ಸಚಿವ ಸಂಪುಟ ಅನುಮೋದನೆ ನೀಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!