HomeKarnataka News27 ಸಾವಿರ ಕೋಟಿ ರೂ. ವಂಚನೆ ಪ್ರಕರಣ: ಅನಿಲ್ ಅಂಬಾನಿ ಕಂಪನಿಗಳ ಮೇಲೆ CBI ದಾಳಿ

27 ಸಾವಿರ ಕೋಟಿ ರೂ. ವಂಚನೆ ಪ್ರಕರಣ: ಅನಿಲ್ ಅಂಬಾನಿ ಕಂಪನಿಗಳ ಮೇಲೆ CBI ದಾಳಿ

For Dai;y Updates Join Our whatsapp Group

Spread the love

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಎಲ್‌ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. 2015ರಿಂದ 2017ರ ಅವಧಿಯಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ನಲ್ಲಿ ಕಾರ್ಯನಿರ್ವಹಿಸಿದ್ದ ಸಿಇಒ, ಸಿಎಫ್‌ಒ ಮತ್ತು ನಿರ್ದೇಶಕರ ನಿವಾಸಗಳ ಮೇಲೆ ದಾಳಿ ನಡೆದಿದೆ.

ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ಸರ್ಚ್ ವಾರಂಟ್ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದ್ದು, ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ತಿಳಿಸಿದೆ.

ಅನಿಲ್ ಅಂಬಾನಿ ನೇತೃತ್ವದ ಸಮೂಹ ಸಂಸ್ಥೆಗಳ ವಿರುದ್ಧ ಕಳೆದ ಕೆಲವು ತಿಂಗಳುಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ವಿವಿಧ ಬ್ಯಾಂಕ್‌ಗಳು ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ನೀಡಿದ ದೂರುಗಳ ಆಧಾರದ ಮೇಲೆ ಈ ತನಿಖೆ ಮುಂದುವರಿದಿದೆ.

ಒಟ್ಟು ವಂಚನೆ ಮೊತ್ತ ಸುಮಾರು 27,337 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದ್ದು, ಈ ಬಹುಕೋಟಿ ಹಗರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ನೇರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಏಪ್ರಿಲ್ 20ರಂದು ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ನ ಜಂಟಿ ಅಧ್ಯಕ್ಷ ಡಿ. ವಿಶ್ವನಾಥ್ ಹಾಗೂ ಉಪಾಧ್ಯಕ್ಷ ಅನಿಲ್ ಕಲ್ಯಾ ಅವರನ್ನು ಸಿಬಿಐ ಬಂಧಿಸಿತ್ತು.

ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಅಕ್ರಮ ಹಾಗೂ ಹಣದ ದುರುಪಯೋಗದಲ್ಲಿ ಇಬ್ಬರ ಪಾತ್ರವಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 31ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!