ವಿಜಯಸಾಕ್ಷಿ ಸುದ್ದಿ, ಮೈಸೂರು
ಕುರುಬ ಸಮುದಾಯ ಎಸ್‌ಟಿ ಪಟ್ಟಿಗೆ ಸೇರಿಸುವ ಹೋರಾಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕರೆದಿದ್ದೇನೆ. ಅವರು ನಮ್ಮ ಜೊತೆಗೆ ಇದ್ದಾರೆ.
ಇದಕ್ಕೆ ಅವರ ವಿರೋಧವಿಲ್ಲ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸಿದ್ದರಾಮಯ್ಯ, ರೇವಣ್ಣ, ಈಶ್ವರಪ್ಪ, ವಿಶ್ವನಾಥ್ ಪ್ರಶ್ನೆ ಅಲ್ಲ. ಇದು ಸಮುದಾಯದ ಪ್ರಶ್ನೆ. ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಎಲ್ಲಾ ಸಂಘಟನೆ, ಪಕ್ಷಗಳ ಬೆಂಬಲ ಕೇಳಿದ್ದೇವೆ. ಅದರಲ್ಲಿ ಆರ್ ಎಸ್ ಎಸ್ ಸಹವಿದೆ. ದೇಶದಲ್ಲಿರುವ ಎಲ್ಲಾ ಕುರುಬ ಅಧಿಕಾರಿಗಳಿಗೆ ಪತ್ರ. ಪತ್ರದ ಮೂಲಕ ಹೋರಾಟಕ್ಕೆ ಬೆಂಬಲ ಕೇಳುತ್ತೇವೆ. ಈ ನಿಟ್ಟಿನಲ್ಲಿ ಡಿ.29 ರಂದು ಕುರುಬ ನಾಯಕರ ಸಭೆ ನಡೆಸುವ ಮೂಲಕ ಹೋರಾಟದ ರೂಪುರೇಷೆ ಸಿದ್ಧಮಾಡಿಕೊಳ್ಳಲಾಗುವು ಎಂದು ವಿಶ್ವನಾಥ್ ತಿಳಿಸಿದರು.
ನಿರಂಜನಾನಂದಪುರಿ ಶ್ರೀಗಳ ಮೂಲಕ ಸರ್ಕಾರಕ್ಕೆ ನಾನು ಹಾಗೂ ಸೋಮಶೇಖರ್ ವರದಿ ಕೊಟ್ಟಿದ್ದೇವೆ. ಆ ಮೂಲಕ ಕೇಂದ್ರಕ್ಕೆ ಮನವಿ ಮಾಡುತ್ತೇವೆ.
ಇಡೀ ಸಮುದಾಯ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕು. ಇದರ ಬಗ್ಗೆ ಪತ್ರ ಚಳುವಳಿ ಮಾಡುತ್ತೇವೆ ಎಂದು ವಿಶ್ವನಾಥ್ ಹೇಳಿದರು
ದೇಶದಲ್ಲಿ RSS ಸಂಘಟನೆಯನ್ನು ಬ್ಯಾನ್ ಮಾಡಿದ್ದಾರಾ? RSS ಅಂದರೆ ಮೈಲಿಗೆ ಏಕೆ? ಎಲ್ಲರ ಬೆಂಬಲ ನಮಗೆ ಬೇಕಾಗಿದೆ.
ಬರೀ ಇದರೊಂದರ ಬಗ್ಗೆ ಏಕೆ ಹೇಳಬೇಕು. ಎಚ್ ವಿಶ್ವನಾಥ್, ಎಮ್ ಎಲ್ ಸಿ