ವಿಜಯಸಾಕ್ಷಿ ಸುದ್ದಿ, ಮೈಸೂರು
Advertisement
ಕುರುಬರ ಎಸ್ ಟಿ ಮೀಸಲಾತಿ ಹೋರಾಟದ ಅಗತ್ಯವೇ ಇಲ್ಲ. ಇದು ಕುರುಬರನ್ನ ಇಬ್ಭಾಗ ಮಾಡುವ ಹುನ್ನಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಜ.29 ಕ್ಕೆ ಮೈಸೂರಿನಲ್ಲಿ ನಡೆಯುವ ಕುರುಬರ ಎಸ್‌ಟಿ ಮೀಸಲಾತಿ ಹೋರಾಟ ಸಭೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು.
ನಗರದಲ್ಲಿ ಮಾತನಾಡಿದ ಅವರು,
ನಾನು ಸಿಎಂ ಆಗಿದ್ದಾಗಲೇ
ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸ್ಸು ಮಾಡಿದ್ದೆ. ಈಶ್ವರಪ್ಪ, ವಿಶ್ವನಾಥ ಇಬ್ಬರು ಬಿಜೆಪಿ ಸರ್ಕಾರದಲ್ಲಿದ್ದಾರೆ.
ಅವರು ಕುಲಶಾಸ್ತ್ರ ಅಧ್ಯಯನ ವರದಿ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿಸಲಿ. ಇದು ಕುರುಬರನ್ನ ಇಬ್ಬಾಗ ಮಾಡುವ ಆರ್‌ಎಸ್‌ಎಸ್ ಹುನ್ನಾರ ಎಂದು ಆರೋಪಿಸಿದರು.