ಬಿಜೆಪಿ ಬಂಡಾಯ ಶಮನಕ್ಕೆ RSS ಶತಪ್ರಯತ್ನ: ಮುನಿಸು ಮರೆತು ಒಂದಾಗ್ತಾರಾ ಯತ್ನಾಳ್, ವಿಜಯೇಂದ್ರ‌…?

0
Spread the love

ಬೆಂಗಳೂರು: ಬಿಜೆಪಿಯಲ್ಲಿ ಉಂಟಾಗಿರುವ ಅಸಮಾಧಾನವನ್ನು ಸರಿದೂಗಿಸಲು ಆರ್‍ಎಸ್‍ಎಸ್  ಮಧ್ಯಪ್ರವೇಶ ಮಾಡಿದ್ದು, ನಾಳೆ  ಮಹತ್ವದ ಸಭೆ ನಡೆಸಲಿದೆ. ಸಭೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯ ಬಿಜೆಪಿ ಉಸ್ತುವಾರಿ ರಾಧಮೋಹನ್‍ದಾಸ್ ಅಗರವಾಲ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ,  ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 40 ಪ್ರಮುಖ ನಾಯಕರನ್ನು ಆಹ್ವಾನಿಸಲಾಗಿದೆ.

Advertisement

ಮಾಗಡಿ ರಸ್ತೆಯ ಚೆನ್ನೇನಹಳ್ಳಿಯಲ್ಲಿರುವ RSS ಕಚೇರಿಯಲ್ಲಿ ಸಭೆ ನಡೆಯಲಿದ್ದು, ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ಪಕ್ಷ ಸಂಘಟನೆ, ಸರ್ಕಾರದ ವಿರುದ್ಧ ಹೋರಾಟ, ಸದಸ್ಯತ್ವ ನೋಂದಣಿ,  ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಸಾಮಾನ್ಯವಾಗಿ ಬಿಜೆಪಿಯ ಆಂತರಿಕ ವಿಷಯದಲ್ಲಿ ಮೂಗು ತೂರಿಸಲು ಹಿಂದೇಟು ಹಾಕುವ ಸಂಘಪರಿವಾರ ಕೇಂದ್ರ ಸಚಿವರೊಬ್ಬರ ಮನವಿ ಮೇರೆಗೆ ಬೈಟಕ್ ನಡೆಸಲು ಮುಂದಾಗಿದ್ದಾರೆಂದು ಸಂಘದ ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕರು ಬಯಸಿದರೆ ಮಾತ್ರ ಎಲ್ಲರನ್ನೂ ಒಟ್ಟುಗೂಡಿಸಿ ಅಸಮಾಧಾನಕ್ಕೆ ಆಸ್ಪದವಿಲ್ಲದಂತೆ ಪಕ್ಷ ಮುನ್ನಡೆಸಿಕೊಂಡು ಹೋಗಬೇಕೆಂದು RSS ನಾಯಕರು ಸೂಕ್ತ ಸಲಹೆ, ಮಾರ್ಗದರ್ಶನ ಮಾಡುತ್ತಾರೆ.  ಅದನ್ನು ಹೊರತುಪಡಿಸಿದರೆ ಬಿಜೆಪಿಯ ಕೆಲವು ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ  ಮಾಡುವುದಿಲ್ಲ.‌ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿರುವ ರಾಜ್ಯವನ್ನು ಪ್ರತಿನಿಧಿಸುವ ಸಂಸದರೊಬ್ಬರು ನೀವು ಹೇಳಿದರೆ ಎಲ್ಲವೂ ಸರಿಹೋಗುತ್ತದೆ. ಪಕ್ಷವು ಕಷ್ಟ ಕಾಲದಲ್ಲಿರುವಾಗ ನೀವು ಮಧ್ಯಪ್ರವೇಶ ಮಾಡಲೇಬೇಕೆಂದು ಕೆಲ ದಿನಗಳ ಹಿಂದೆ ಕೋರಿಕೊಂಡಿದ್ದರು ಅವರ ಮನವಿ ಮೇರೆಗೆ ಸಭೆ ನಡೆಯುತ್ತಿದೆ.


Spread the love

LEAVE A REPLY

Please enter your comment!
Please enter your name here