HomeKarnataka NewsRSS ದೇಶದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದೆ: ಸಂಸದ ಯದುವೀರ್ ಒಡೆಯರ್

RSS ದೇಶದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದೆ: ಸಂಸದ ಯದುವೀರ್ ಒಡೆಯರ್

For Dai;y Updates Join Our whatsapp Group

Spread the love

ಮೈಸೂರು: ದೇಶದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಉಳಿಸುವ ಕೆಲಸವನ್ನು ಆರ್‌ಎಸ್‌ಎಸ್‌ ಮಾಡುತ್ತಿದೆ. ಅದರ ಕಾರ್ಯವನ್ನು ದೇಶದ ಜನರು ಮೆಚ್ಚಿಕೊಂಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಯದುವೀರ್ ಒಡೆಯರ್ ಟೀಕಿಸಿದರು.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದು, ವಿಕಸಿತ ಭಾರತದ ನಿರ್ಮಾಣಕ್ಕಾಗಿ ದೃಢವಾದ ಅಡಿಪಾಯ ಹಾಕಿದ್ದಾರೆ.

ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಆದರೆ ಇಂದು ಭಾರತ ಜಾಗತಿಕ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಅನೇಕ ವಿದೇಶಿ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡುತ್ತಿವೆ ಎಂದು ಹೇಳಿದರು.

ಮೋದಿ ಸರ್ಕಾರದ ಸಾಧನೆಗಳನ್ನು ಉಲ್ಲೇಖಿಸಿದ ಯದುವೀರ್, ಸುಮಾರು 25 ಕೋಟಿ ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ. ದೇಶದಲ್ಲಿ ಬಡವರ ಪ್ರಮಾಣ ಶೇ.29ರಿಂದ ಶೇ.11ಕ್ಕೆ ಇಳಿದಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗಳಿಗೆ ನೇರವಾಗಿ ವಾರ್ಷಿಕ ₹6,000 ಜಮೆಯಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ತಿಳಿಸಿದರು.

ಮಹಿಳಾ ಸ್ವಸಹಾಯ ಸಂಘಗಳಿಗೆ ಹೆಚ್ಚಿನ ಸಾಲ ಸೌಲಭ್ಯ ಒದಗಿಸಲಾಗಿದೆ. ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಭಾರತೀಯ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ವಿಶ್ವ ಮಟ್ಟದಲ್ಲಿ ಭಾರತಕ್ಕೆ ಗೌರವವೂ ಹೆಚ್ಚಿದೆ. ಇವೆಲ್ಲವೂ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ಸಾಧನೆಗಳು ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!