HomeKarnataka Newsಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ RSS ಹುನ್ನಾರ: ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ RSS ಹುನ್ನಾರ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ‘ಮನರೇಗಾ ಬಚಾವ್ ಸಂಗ್ರಾಮ್” ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇತ್ತೀಚೆಗೆ ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (MGNREGA) ಕಾಯ್ದೆಯನ್ನು ರದ್ದು ಮಾಡಿ, ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಶನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ತಿಳಿಸಿದರು.

2005 ರಲ್ಲಿ ಮನಮೋಹನ್ ಸಿಂಗ್ ಪ್ರದಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರ ಹಕ್ಕು, ಕೆಲಸದ ಹಕ್ಕು, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳನ್ನು ಕಾಂಗ್ರೆಸ್ನ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಬಂದ ಜನಪರ ಕಾಯ್ದೆಗಳಾಗಿದ್ದುವು. ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದರು.

ಬಿಜೆಪಿಯವರು ಈ ಜನಪರ ಯೋಜನೆಗಳನ್ನು ನಾಶಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡಲಾಗುತ್ತಿದೆ. ಸುಮಾರು ಶೇ. 53 ರಷ್ಟು ಮಹಿಳೆಯರು, ಶೇ. 28 ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ ಕೇಂದ್ರ ಸರ್ಕಾರ, ಆರ್ ಎಸ್ ಎಸ್ ಅವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ ಎಂದರು.

ಬಿಜೆಪಿಯವರು ಕಾಂಗ್ರೆಸ್ ನ ಜನಪರ ಗ್ಯಾರಂಟಿ ಯೋಜನೆಗಳ ಬಗ್ಗೆ ‘ವೋಟ್ ಗಾಗಿ ಮಾಡಿದ ಯೋಜನೆಗಳು’ ಎಂದು ಟೀಕಿಸುತ್ತಿದ್ದರು. ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ನರೇಗಾ ಯಿಂದ ವರ್ಷದ ಯಾವುದೇ ದಿನಗಳಲ್ಲಿ ಕೆಲಸ ಮಾಡಬಹುದಿತ್ತು. ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತಿಗಳು ಈ ಮೊದಲು ಕೆಲಸವನನ್ನು ನಿರ್ಧರಿಸಲಾಗುತ್ತಿತ್ತು. ಆದರೆ ಈಗ ಬಡವರ ಗ್ರಾಮೀಣ ಬಡಜನರ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು , ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!