ಬಳ್ಳಾರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಆರ್.ಟಿ.ಓ ಅಧಿಕಾರಿ

0
Spread the love

ಬಳ್ಳಾರಿ ;- ಆರ್.ಟಿ.ಓ ಅಧಿಕಾರಿ ಬಳ್ಳಾರಿಯಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಆರ್.ಟಿ.ಓ ಅಧೀಕ್ಷ ಚಂದ್ರಕಾಂತ ಗುಡಿಮನಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಏಜೆಂಟ್ ಮೊಹಮ್ಮದ್ ರಾಜ್ ಸಿಕ್ಕಿಬಿದ್ದವರು.  ಬಳ್ಳಾರಿಯ ಉಮೇಶ್ ಅನ್ನೋರ ಬಳಿ 15,000/ರೂ ತೆಗೆದುಕೊಳ್ಳವಾಗ ಲೋಕ ದಾಳಿ ನಡೆಸಿದೆ.

Advertisement

ನಿನ್ನೆ ರಾತ್ರಿ 10.20ರ ಸಮಯದಲ್ಲಿ ಹಣ ಪಡೆಯುವ ಸಂದರ್ಭದಲ್ಲಿ ಚಂದ್ರಕಾಂತ್ ಮತ್ತು ಮೊಹಮ್ಮದ್ ರಾಜ್ ಟ್ರ್ಯಾಪ್ ಮಾಡಲಾಗಿದೆ.

ಇಬ್ಬರನ್ನು ಬಳ್ಳಾರಿಯ ಹಾಲಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ, ಇಂದು ಬೆಳಿಗ್ಗೆ ನ್ಯಾಯಲಯಕ್ಕೆ ಆರೋಪಿಗಳನ್ನು ಹಾಜರು ಪಡಿಸಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಸಾರ್ವಜನಿಕರಿಂದ ಆರ್.ಟಿ.ಓ ಅಧಿಕಾರಿಗಳ ಮೇಲೆ ಸಾಕಷ್ಟು ದೂರುಗಳು ಕೇಳಿಬರುತ್ತಿದ್ದವು, ಇತ್ತೀಚೆಗೆ ನಗರ ಶಾಸಕ ಭರತ್ ರೆಡ್ಡಿ ಅವರು ಈ ಕುರಿತು ಆರ್.ಟಿ.ಓ ಕಛೇರಿಗೆ ಭೇಟಿ ನೀಡಿ ಖಡಕ್ ಎಚ್ಚರಿಕೆ ನೀಡಿರುವುದನ್ನು ಸ್ಮರಿಸಬಹುದು.


Spread the love

LEAVE A REPLY

Please enter your comment!
Please enter your name here