ದಾವಣಗೆರೆ:- ಭೀಕರ ರಸ್ತೆ ಅಪಘಾತದಲ್ಲಿ ಆರ್‌ಟಿಓ ಅಧೀಕ್ಷಕ ಸಾವನ್ನಪ್ಪಿರುವ ಘಟನೆ ನಗರದ ರಿಂಗ್ ರೋಡ್‌ನ ನವೋದಯ ಶಾಲೆ ಎದುರು ಜರುಗಿದೆ.
Advertisement
ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ತಿಪ್ಪೇಸ್ವಾಮಿ (43) ಮೃತ ದುರ್ದೈವಿ. ನಗರದ ರಿಂಗ್ ರೋಡ್ ಬಳಿ ತಿಪ್ಪೇಸ್ವಾಮಿ ಅವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತಿಪ್ಪೇಸ್ವಾಮಿ ಅವರು ರಸ್ತೆಗೆ ಬಿದ್ದಿದ್ದರು. ಅವರು ಹೆಲ್ಮೆಟ್ ಧರಿಸಿದ್ದರೂ ಬಸ್‌ನ ಟೈಯರ್ ಅವರ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ, ನಗರ ಡಿವೈಎಸ್ಪಿ ಶರಣಬಸವೇಶ್ವರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.