ಚಿಕ್ಕಮಗಳೂರು:– ಬೀದಿ ನಾಯಿ ಜೊತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ಸಿಸಿಟಿವಿ ದೃಶ್ಯ ಆಧರಿಸಿ ವ್ಯಕ್ತಿ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಜರುಗಿದೆ.
Advertisement
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಘಟನೆ ಸಂಭವಿಸಿದೆ. ಕಳೆದ ಅ.18ರಂದು ಜಯಪುರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯ ಅಸಭ್ಯ ವರ್ತನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಶಿವರಾಜ್ ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ನ.9ರಂದು ಜಯಪುರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಸಂಬಂಧ ತನಿಖೆ ಚುರುಕುಗೊಂಡಿದೆ.