ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ಸೂಪರ್ ಹಿಟ್ ಆಗಿದ್ದು ಈ ಸಿನಿಮಾದಲ್ಲಿ ರಿಷಬ್ ಗೆ ಜೋಡಿಯಾಗಿ ನಟಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಮೂಲಕ ಸಪ್ತಮಿ ಗೌಡ ಸ್ಟಾರ್ ನಟಿಯಾಗಿ ಗುರುತಿಸಿಕೊಂಡರು. ಇದೀಗ ಈ ಚಿತ್ರದ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ ರೆಡಿಯಾಗಿದ್ದು ಈ ಸಿನಿಮಾಗೆ ನಾಯಕಿ ಯಾರು ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಇದೀಗ ಈ ವಿಷಯದ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದ್ದು, ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಕನಕವತಿ ಪಾತ್ರದ ಪೋಸ್ಟರ್ ರಿಲೀಸ್ ಆಗಿದೆ. ಈ ಪಾತ್ರದಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದಾರೆ.
‘ಕಾಂತಾರ: ಚಾಪ್ಟರ್ 1’ ರಿಲೀಸ್ಗೆ ಇನ್ನೇನೂ ಕೆಲವೇ ತಿಂಗಳು ಬಾಕಿ ಉಳಿದಿವೆ. ಹೀಗಾಗಿ, ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ಆರಂಭಿಸಲು ತಂಡ ರೆಡಿಯಾಗಿದ್ದು ಇದರ ಭಾಗವಾಗಿ ಸಿನಿಮಾದ ನಾಯಕಿ ಪಾತ್ರದ ಪರಿಚಯವನ್ನು ನೀಡಲಾಗಿದೆ. ರುಕ್ಮಿಣಿ ವಸಂತ್ ಈ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದು ಕನಕವತಿ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.
ನಮ್ಮ ಚಿತ್ರದ ಕನಕವತಿಯನ್ನ ನಿಮ್ಮ ಮುಂದೆ ಪರಿಚಯಿಸುತ್ತಿದ್ದೇವೆ ಅಂತಲೇ ಹೊಂಬಾಳೆ ಸಂಸ್ಥೆ ಹಬ್ಬದ ದಿನವೇ ಈ ಒಂದು ಪೋಸ್ಟರ್ ರಿಲೀಸ್ ಮಾಡಿದೆ. ಈ ಮೂಲಕ ನಾಡಿನ ಜನತೆಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯವನ್ನೂ ತಿಳಿಸಿದ್ದಾರೆ.