ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಎಚ್.ಸಿ.ಇ.ಎಸ್ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದ ಅಡಿಯಲ್ಲಿ ಹುಬ್ಬಳ್ಳಿಯ ಜಿ.ಕೆ. ಕಾನೂನು ಮಹಾವಿದ್ಯಾಲಯ ಆಯೋಜಿಸಿದ್ದ ಅಂತರ್ ಮಹಾವಿದ್ಯಾಲಯಗಳ ಹುಬ್ಬಳ್ಳಿ ವಲಯ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್ ಅಪ್ ಪ್ರಶಸ್ತಿ ಗಳಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ನಾಟಕ (ಸ್ಕಿಟ್)-ಪ್ರಥಮ, ಜನಪದ ವಾದ್ಯ ಸಂಗೀತ-ಪ್ರಥಮ, ಚಿತ್ರಕಲೆ-ಪ್ರಥಮ, ಕಾರ್ಟೂನಿಂಗ್-ದ್ವಿತೀಯ, ಅನುಕರಣೆ (ಮಿಮಿಕ್ರಿ)-ದ್ವಿತೀಯ ಬಹುಮಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಪ್ರಾಂಶುಪಾಲರು, ಆಡಳಿತ ವಿಭಾಗ, ಬೋಧಕ–ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.



