HomeGadag Newsಗೈಡ್‌ಗಳು ತಂತ್ರಜ್ಞಾನಗಳ ಜ್ಞಾನ ಹೆಚ್ಚಿಸಿಕೊಳ್ಳಿ : ರಾಮಪ್ರಸಾದ

ಗೈಡ್‌ಗಳು ತಂತ್ರಜ್ಞಾನಗಳ ಜ್ಞಾನ ಹೆಚ್ಚಿಸಿಕೊಳ್ಳಿ : ರಾಮಪ್ರಸಾದ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ತರಬೇತಿ ಕಾರ್ಯಕ್ರಮಕ್ಕೆ ಇವರು ಭಾಗವಹಿಸಿ ಮಾತನಾಡುತ್ತಾ ಪ್ರವಾಸಿ ಗೈಡ್‌ಗಳಿಗೆ ಇಂತಹ ತರಬೇತಿ ಕಾರ್ಯಕ್ರಮಗಳು ಅತಿ ಅವಶ್ಯಕವಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ಈ ತರಬೇತಿ ಕಾರ್ಯಕ್ರಮ ಆಯೋಜಿಸಿದಕ್ಕೆ ವಿಶ್ವವಿದ್ಯಾಲಯಕ್ಕೆ ಧನ್ಯವಾದಗಳು ಎಂದು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಮಪ್ರಸಾದ ಮನೋಹರ ಭಾ.ಆ.ಸೇ ನುಡಿದರು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಪ್ರವಾಸಿ ಗೈಡ್‌ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರವಾಸಿ ಗೈಡ್‌ಗಳು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸೌಹಾರ್ದಯುತವಾಗಿ ಪ್ರವಾಸಿ ತಾಣಗಳ ಗತವೈಭವ ಕುರಿತು ಮಾಹಿತಿ ನೀಡಬೇಕು. ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಪರಿಚಯಿಸಿ ಪ್ರವಾಸಿ ತಾಣಗಳ ಬಗ್ಗೆ ಗೌರವ ಮತ್ತು ಹೆಮ್ಮೆ ಉಂಟು ಮಾಡಬೇಕೆಂದು ಹೇಳಿದರು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಗಳು(ಪ್ರಭಾರ) ಮತ್ತು ಕುಲಸಚಿವರಾದ ಪ್ರೊ. ಡಾ. ಸುರೇಶ ನಾಡಗೌಡರ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಸೂಕ್ತ ಸಲಹೆ ನೀಡಿದಕ್ಕೆ ಧನ್ಯವಾದಗಳನ್ನು ತಿಳಿಸಿ, ಮುಂಬರುವ ದಿನಗಳಲ್ಲಿ ಪ್ರವಾಸಿ ಗೈಡ್‌ಗಳಿಗೆ ವಿಶ್ವವಿದ್ಯಾಲಯದಿಂದ ಸರ್ಟಿಫಿಕೇಟ್, ಡಿಪ್ಲೋಮಾ ಕೋರ್ಸ್ಗಳನ್ನು ಪ್ರಾರಂಭಿಸಲು ಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.

ವಿಶ್ವವಿದ್ಯಾಲಯದ ತರಬೇತಿ ವಿಭಾಗದ ಸಹಾಯಕ ನಿರ್ದೇಶಕರಾದ ಡಾ. ಅಬ್ದುಲ್ ಅಜೀಜ್ ಮುಲ್ಲಾ, ಗದಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ್ವರ ವಿಭೂತಿ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಸ್ತುತ, ಪ್ರವಾಸೋದ್ಯಮವು ಹೆಚ್ಚು ಪ್ರಖ್ಯಾತಿ ಪಡೆದಿರುವದರಿಂದ ಪ್ರವಾಸಿ ಗೈಡ್‌ಗಳು ಈ ಕಾಲದಲ್ಲಿ ನವೀನ ತಂತ್ರಜ್ಞಾನಗಳ ಕುರಿತು ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರಲ್ಲದೆ, ಪ್ರವಾಸಿ ಗೈಡ್‌ಗಳ ಹಲವಾರು ಬೇಡಿಕೆಗಳ ಕುರಿತು ಸರಕಾರದ ಗಮನಕ್ಕೆ ತಂದು ಪರಿಹರಿಸುವುದಾಗಿ ರಾಮಪ್ರಸಾದ ಮನೋಹರ ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!