HomeGadag Newsಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ: ರವಿಕಾಂತ ಅಂಗಡಿ

ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ: ರವಿಕಾಂತ ಅಂಗಡಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆ ಹೆಚ್ಚಿದ್ದು, ಕ್ರೀಡಾ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ವಕೀಲ ಹಾಗೂ ಉತ್ತರ ಕರ್ನಾಟಕ ಮಹಾಸಭಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಹೇಳಿದರು.

ಮಜ್ಜೂರ ಸರ್ಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ದ ವಲಯ ಮಟ್ಟದ ಕ್ರೀಡಾಕೂಟಕ್ಕೆ ವಾಲಿಬಾಲ್ ಆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಕ್ರೀಡೆಗಳನ್ನು ಹೆಚ್ಚು ಉತ್ತೇಜಿಸುವ ಮೂಲಕ ಅವುಗಳ ಸೊಗಡನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕು. ಕ್ರೀಡೆಯಿಂದ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ಹೆಚ್ಚಿನ ವಿದ್ಯಾರ್ಥಿಗಳು ಕ್ರೀಡಾ ಹಾಸ್ಟೆಲ್‌ಗಳಿಗೆ ಆಯ್ಕೆಯಾಗಿ ಸರ್ಕಾರದ ಸೌಲಭ್ಯ ಪಡೆದು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು ಎಂದರು.

ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಸಿಮೀಕೇರಿ ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡ ಮನೋಭಾವ ಬೆಳೆಸುತ್ತದೆ ಎಂದರು.

ಮಜ್ಜೂರ ಸರ್ಕಾರಿ ಪ್ರೌಢಶಾಲೆ, ರಣತೂರು, ಛಬ್ಬಿ ಹಾಗೂ ಮಾಚೆಹಳ್ಳಿ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ವಾಲಿಬಾಲ್, ಥ್ರೋಬಾಲ್, ಕಬಡ್ಡಿ, ಖೋ-ಖೋ ಸೇರಿದಂತೆ ವಿವಿಧ ವೈಯಕ್ತಿಕ ಹಾಗೂ ಸಾಮೂಹಿಕ ಕ್ರೀಡಾ ಸ್ಪರ್ಧೆಗಳು ನಡೆದವು.

ಮಜ್ಜೂರ ಗ್ರಾಮದ ಮುಖಂಡ ಶ್ರೀದೇವಪ್ಪ ಮಾದರ ಥ್ರೋಬಾಲ್, ಗುತ್ತಿಗೆದಾರ ಮಂಜು ಕಿರಣ ಪಾಟೀಲ ಕಬಡ್ಡಿ, ಗ್ರಾಮದ ಮುಖಂಡ ದಾದಾಫೀರ್ ನಾಯಕನವರ ಖೋ-ಖೋ ಪಂದ್ಯಗಳಿಗೆ ಚಾಲನೆ ನೀಡಿದರು. ಆಪ್ರಿದ್ ಬೈರಕ್‌ದಾರ ವೈಯಕ್ತಿಕ ಆಟಗಳಿಗೆ ಚಾಲನೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ರವಿ ಲಮಾಣಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಹಳೆ ವಿದ್ಯಾರ್ಥಿ ಸೇವಾಲಾಲ ಸಂಘ, ಶಿವಾಜಿನಗರ ತಾಂಡಾದ ಮಹೇಶ ಲಮಾಣಿ ವಿಜೇತರಿಗೆ ಪ್ರಶಸ್ತಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ವಸಂತ ಲಮಾಣಿ, ಬಸಪ್ಪ ಮುಂಡವಾಡ, ಎಸ್‌ಆರ್‌ಡಿಕೆ ಸಂಸ್ಥೆಯ ಮಾಲೀಕ ಮಂಜುನಾಥ ಲಮಾಣಿ, ಛಬ್ಬಿ ಕ್ಲಸ್ಟರ್‌ನ ಸಿಆರ್‌ಪಿ ಗೀತಾ ಸರ್ವಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸಂತೋಷ ದಾಮೋದರ ನಿರೂಪಿಸಿದರು. ಕಿರಣಕುಮಾರ ಎಂ. ಲಮಾಣಿ ಸ್ವಾಗತಿಸಿದರು. ರೇಷ್ಮಾ ಎಚ್. ಪ್ರಾರ್ಥಿಸಿದರು. ಎಫ್.ಎ. ಮಕರಬಿ ವಂದನಾರ್ಪಣೆ ಸಲ್ಲಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಲ್ಲೇ ಕ್ರೀಡಾ ಪ್ರತಿಭೆ ಹೆಚ್ಚಿದ್ದು, ಅವರಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು. ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕು. ಕ್ರೀಡೆಯಿಂದ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಸಾಮರ್ಥ್ಯವೂ ವೃದ್ಧಿಸುತ್ತದೆ.

— ರವಿಕಾಂತ ಅಂಗಡಿ, ವಕೀಲರು ಹಾಗೂ ಉತ್ತರ ಕರ್ನಾಟಕ ಮಹಾಸಭಾ ರಾಜ್ಯಾಧ್ಯಕ್ಷರು

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img