HomeKarnataka Newsಬಿಜೆಪಿ ಪಕ್ಷದ ಸಧ್ಯದ ಸ್ಥಿತಿ ನೋಡಿ ಬೇಸರವಾಗುತ್ತಿದೆ: ಸ್ವಪಕ್ಷದ ವಿರುದ್ಧ ಲಿಂಬಾವಳಿ ಗುಡುಗು!

ಬಿಜೆಪಿ ಪಕ್ಷದ ಸಧ್ಯದ ಸ್ಥಿತಿ ನೋಡಿ ಬೇಸರವಾಗುತ್ತಿದೆ: ಸ್ವಪಕ್ಷದ ವಿರುದ್ಧ ಲಿಂಬಾವಳಿ ಗುಡುಗು!

For Dai;y Updates Join Our whatsapp Group

Spread the love

ಬೆಂಗಳೂರು:- ಬಿಜೆಪಿ ಪಕ್ಷದ ಸಧ್ಯದ ಸ್ಥಿತಿ ನೋಡಿ ಬೇಸರವಾಗುತ್ತಿದೆ ಎಂದು ಸ್ವಪಕ್ಷದ ವಿರುದ್ಧ ಅರವಿಂದ್ ಲಿಂಬಾವಳಿ ಗುಡುಗಿದ್ದಾರೆ.

ಈ ಸಂಬಂಧ “x’ ಮಾಡಿರುವ ಅವರು, ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ ಎಂದಿದ್ದಾರೆ.

ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಸದ್ಯದ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರವಾಗುತ್ತಿದೆ ಎಂದರು.

ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ! ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ ಎಂದಿದ್ದಾರೆ

ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ. ಇದರ ಸಂಪೂರ್ಣ ಲಾಭವನ್ನು ಆಡಳಿತ ಪಕ್ಷ ಪಡೆಯಲು ಸಹಾಯಕವಾಯಿತು. ಸಿಕ್ಕ ಅವಕಾಶ ಮತ್ತು ಸಮಯವನ್ನು ಸದನದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ. ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆ ಹಣಕ್ಕೆ ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟಿರುವ ಅನುದಾನ ದುರ್ಬಳಕೆ ಹೀಗೆ ಯಾವ ವಿಷಯವನ್ನೂ ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!