ಸದನಾಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌: 3 ಲಕ್ಷ ದೋಚಿದ ಸೈಬರ್‌ ಖದೀಮರು!

0
Spread the love

ಬೆಂಗಳೂರು: ಡಿಜಿಟಲ್ ಬ್ಯಾಂಕಿಂಗ್ ನಮ್ಮ ದಿನನಿತ್ಯದ ಜೀವನದ ಒಂದು ಭಾಗವಾಗುತ್ತಿದ್ದಂತೆ, ಸೈಬರ್ ವಂಚನೆ ಮತ್ತು ಬ್ಯಾಂಕ್ ಖಾತೆ ಹ್ಯಾಕಿಂಗ್ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಮಾಜಿ ಸಿಎಂ ಸದನಾಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಹ್ಯಾಕ್ ಮಾಡಿ ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ಕದ್ದಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ 75 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ 75 ಪೌರ ಕಾರ್ಮಿಕರರಿಗೆ ಆರ್‌ಎಂವಿ ಎಕ್ಸ್ ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ಡಿವಿಎಸ್‌ ಮಾಧ್ಯಮಗಳ ಜೊತೆ ಮಾತನಾಡಿ,

ನಿನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ.ಸುಮಾರು 3 ಲಕ್ಷ ರೂ. ಹಣ ಹೋಗಿದೆ ಎಂದು ತಿಳಿಸಿದರು. ಹೆಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್ ಗೆ ದೂರು ನೀಡುತ್ತೇನೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here