ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಲಕ್ಷ್ಮೇಶ್ವರ ತಾಲೂಕು ಸಂಚಾಲಕರಾಗಿ ಸದಾನಂದ ನಂದೆಣ್ಣವರ ಅವರನ್ನು ನೇಮಕ ಮಾಡಲಾಗಿದೆ.
ಶನಿವಾರ ಗದಗದಲ್ಲಿ ರಾಜ್ಯ ಸಂಘಟನೆಯ ವತಿಯಿಂದ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಗದಗ ಜಿಲ್ಲಾ ಸಂಚಾಲಕ ದುರ್ಗಪ್ಪ ಎಲ್.ಎಚ್. ಅವರು ನೇಮಕಾತಿ ಆದೇಶ ಪತ್ರ ವಿತರಿಸಿದರು.



