ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಡೆದ ದಾಳಿ ಇಡೀ ಬಾಲಿವುಡ್ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿದೆ. ಗುರುವಾರ ಮುಂಜಾನೆ 2.30ರ ಸುಮಾರಿಗೆ ಸೈಫ್ ಮನೆಗೆ ಮುಗ್ಗಿದ ದುಷ್ಕರ್ಮಿಗಳು ನಟನ ಮೇಲೆ 6 ಬಾರಿ ಚಾಕು ಇರಿತ ನಡೆಸಿದ್ದಾರೆ. ಚಾಕು ಇರಿತಕ್ಕು ಮುನ್ನ 1 ಕೋಟಿಗೆ ದುಷ್ಕರ್ಮಿ ಡಿಮ್ಯಾಂಡ್ ಮಾಡಿದ್ದ ಎನ್ನಲಾಗುತ್ತಿದೆ.
ಜ.16 (ಗುರುವಾರ) ಸೈಫ್ ಮನೆಗೆ ನುಗ್ಗಿದ ದುಷ್ಕರ್ಮಿ ಮೊದಲು ಎಂಟ್ರಿಕೊಟ್ಟಿದ್ದು ಸೈಫ್ ಅಲಿ ಖಾನ್ ಅವರ ಎರಡನೇ ಮಗ 4 ವರ್ಷದ ಜಹಾಂಗೀರ್ ರೂಮಿಗೆ. ಈ ವೇಳೆ ಅಲ್ಲಿದ್ದ ನರ್ಸ್ ಬಳಿ 1 ಕೋಟಿಗೆ ಬೇಡಿಕೆ ಇಟ್ಟಿದ್ದ ಎಂದು ನರ್ಸ್ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
56 ವರ್ಷದ ನರ್ಸ್ ಎಲಿಯಾಮಾ ಫಿಲಿಪ್ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪರಿಚಿತ ಮನೆಗೆ ನುಗ್ಗಿ ಸೈಫ್ ಅಲಿ ಖಾನ್ ಅವರ ಮಗ ಜೆಹ್ ಮಲಗಿದ್ದ ರೂಮ್ ಗೆ ಹೋಗಿದ್ದ. ಆಕೆಯ ಬಳಿ ₹1 ರೂಗೆ ಕೋಟಿಗೆ ಬೇಡಿಕೆ ಇಟ್ಟಿದ್ದ. ನಿರಾಕರಿಸಿದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗ್ತಿದೆ.
ಪೊಲೀಸ್ ಜಂಟಿ ಆಯುಕ್ತ ಸತ್ಯನಾರಾಯಣ ಚೌಧರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಒಳನುಗ್ಗಿದ ವ್ಯಕ್ತಿ 1 ಕೋಟಿಗೆ ಬೇಡಿಕೆ ಇಟ್ಟಿದ್ದಾನೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದ್ದು, ಇದೊಂದು ಕಳ್ಳತನ ಪ್ರಕರಣ ಎಂದು ಹೇಳಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಗುರುತಿಸಲಾಗಿದೆ ಎಂದಿದ್ದಾರೆ.
ಸೈಫ್ ಅಲಿಖಾನ್ ಮೇಲೆ ಹಲ್ಲೆ ನಡೆಸಿದ ಆರೋಪಿಯ ಸಿಸಿಟಿವಿ ವಿಡಿಯೋ ವೈರಲ್ ಆಗ್ತಿದೆ. ಈ ವಿಡಿಯೋದಲ್ಲಿ ಆರೋಪಿಯ ಮುಖ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕ್ಯಾಮೆರಾ ನೋಡಿದ ತಕ್ಷಣ ಆತ ಮುಖ ಮರೆ ಮಾಚಲು ಯತ್ನಿಸಿದ್ದಾನೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಸೈಫ್ ಅಲಿ ಖಾನ್ ಮೇಲೆ ಮುಂಜಾನೆ 1:30ರ ಸುಮಾರಿಗೆ ದಾಳಿ ನಡೆದಿದೆ. ಆದ್ರೆ, ಸಿಸಿಟಿವಿ ದೃಶ್ಯಾವಳಿಯಲ್ಲಿ ಆರೋಪಿ 2.30 ರ ಸಮಯಲ್ಲಿ ಓಡಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.