HomeGadag Newsಸಂತ ಕನಕದಾಸರ ಜಯಂತಿ ನ. 8ಕ್ಕೆ

ಸಂತ ಕನಕದಾಸರ ಜಯಂತಿ ನ. 8ಕ್ಕೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 8ರಂದು ಬೆಳಿಗ್ಗೆ 9 ಗಂಟೆಗೆ ನಗರದ ಹಾತಲಗೇರಿ ನಾಕಾದ ಕನಕದಾಸರ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರು, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಉಪಾಧ್ಯಕ್ಷ ಡಿ.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಶ್ ಶೆಟ್ಟರ್, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಆಗಮಿಸುವರು.

ಜಿಲ್ಲಾಧಿಕಾರಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೊಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ್ ಬಳ್ಳಾರಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ವಿಶೇಷ ಆಹ್ವಾನಿತರಾಗಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ ಆಗಮಿಸುವರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!