Dinesh Gundurao: ಸರಿಯಾದ ಸಮಯಕ್ಕೆ 108 ಸಿಬ್ಬಂದಿಗಳ ವೇತನ ಪಾವತಿ ಆಗಿದೆ: ಗುಂಡೂರಾವ್!

0
Spread the love

ಬೆಂಗಳೂರು:- ಸರಿಯಾದ ಸಮಯಕ್ಕೆ 108 ಸಿಬ್ಬಂದಿಗಳ ವೇತನ ಪಾವತಿ ಆಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, 108 ಆರೋಗ್ಯ ಕವಚದ ಅಂಬುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂದರು.

ಅಂಬುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನ ಕಾಲ ಕಾಲಕ್ಕೆ ಸರಿಯಾಗಿ ಸಂಬಂಧಿಸಿದ ಏಜನ್ಸಿಯವರಿಗೆ ಸರ್ಕಾರ ನೀಡುತ್ತಾ ಬಂದಿದೆ. ಚಾಲಕರ ವೇತನ ಬಾಕಿ ಉಳಿಸಿಕೊಳ್ಳದಂತೆ ಇ.ಎಂ.ಆರ್ ಏಜನ್ಸಿಯವರಿಗೂ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳ ವೇತನವನ್ನ ಏಜನ್ಸಿಯವರು ಚಾಲಕರಿಗೆ ಪಾವತಿ ಮಾಡಿದ್ದಾರೆ. ಅಕ್ಟೋಬರ್ ತಿಂಗಳ ವೇತನ ಪಾವತಿ ಕೂಡ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ ಎಂದರು.

ವಿಪಕ್ಷ ನಾಯಕರಾದ ಆರ್. ಅಶೋಕ್ ಅರೆಬರೆ ಮಾಹಿತಿ ಪಡೆದು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಒಬ್ಬ ವಿಪಕ್ಷ ನಾಯಕರಾಗಿ ವಾಸ್ತವಾಂಶಗಳನ್ನ ಅರಿತು ಮಾತನಾಡಬೇಕು. 108 ಸಮಸ್ಯೆ ಆರಂಭವಾಗಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏಜನ್ಸಿ ಹಾಗೂ ಚಾಲಕರ ನಡುವಿನ ಸಮಸ್ಯೆಯನ್ನು ಇಲಾಖೆ ಮಧ್ಯಸ್ಥಿಕೆ ವಹಿಸಿ ಸರಿಪಡಿಸುತ್ತಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠ ವೇತನ ಜಾರಿಗೊಳಿಸಿದ್ದಲ್ಲದೇ ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ 45% ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here