ಧಾರವಾಡ: ಜಿಲ್ಲೆಯಲ್ಲಿ ನಿಷೇಧಿತ ಪಟಾಕಿ ಮಾರಾಟ, ಬಳಕೆಗೆ ನಿರ್ಬಂಧಿ ವಿಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
Advertisement
ಅನಧಿಕೃತವಾಗಿ ಪಟಾಕಿ ಮಾರಾಟ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಿಯಮ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದಾರೆ. ಒಂದು ವೇಳೆ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮತ್ತು ಬಳಕೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.