ಯಾದಗಿರಿ:– ಅಂಗನವಾಡಿಯೊಂದರ ಕರ್ಮಕಾಂಡ ಬಯಲಾಗಿದ್ದು, ಮೂಟೆಗಟ್ಟಲೇ ಆಹಾರ ಪದಾರ್ಥ ಕಾಳಸಂತೆಯಲ್ಲಿ ಮಾರಾಟವಾಗಿರುವಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಹಗರಟಗಿ ಗ್ರಾಮದಲ್ಲಿ ನಡೆದಿದೆ.
ಹಗರಟಗಿ ಗ್ರಾಮದ ಅಂಗನವಾಡಿ ಕೇಂದ್ರ-2ರ ಅಕ್ರಮ ಬಯಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಉಮಾರಿಂದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಅಕ್ಕಿ, ಬೇಳೆ, ಶೇಂಗಾ, ಬೆಲ್ಲ, ಚಿಕ್ಕೆ ಹಾಗೂ ಅಡುಗೆ ಎಣ್ಣೆ ಸೇರಿದಂತೆ ಸರ್ಕಾರದಿಂದ ಬರುವ ಆಹಾರ ಪದಾರ್ಥಗಳನ್ನು ಮೂಟೆಯಲ್ಲಿ ಉಮಾ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಸ್ಥಳೀಯರ ಮೊಬೈಲ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯ ಕಳ್ಳಾಟ ಬಯಲಾಗಿದೆ.
ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದ ಬಗ್ಗೆ ಆರೋಪ ಕೇಳಿಬಂದಿತ್ತು. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿದ ನಂತರ ಮೊಟ್ಟೆಯನ್ನು ಕಸಿದುಕೊಂಡಿದ್ದ ವಿಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.