ಹಾವೇರಿ:- ಶಹರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಹಾವೇರಿಯ ನಾಗೇಂದ್ರನಮಟ್ಟಿಯಿಂದ ಶಾಂತಿನಗರಕ್ಕೆ ಹೋಗುವ ರಸ್ತೆ ಬದಿಯಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದು ಕಾರ್ಯಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸವಣೂರಿನ ಮಲಿಕ್ ರೆಹಾನ, ರಿಯಾಜ್ ಅಹ್ಮದ ಬಕ್ರಿಯಾವಾಲೆ, ಪುರಖಾನ ಬಾಬಾಜಾನ ಪಟವೆಗಾರ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಬಂಧಿತರಿಂದ 2,96,075 ರೂ ಮೌಲ್ಯದ 11 KG 843 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾ ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.