ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪೆಡ್ಲರ್ಸ್ ಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಆರೋಪಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ CCB ಕಾರ್ಯಚರಣೆ ಮಾಡಿ ಮೂವರು ಪೆಡ್ಲರ್ಸ್ ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷ ಮೌಲ್ಯದ 82 ಗ್ರಾಂ ಎಂಡಿಎಮ್ಎ ಕ್ರಿಸ್ಟಲ್ ವಶಕ್ಕೆ ಪಡೆದಿದ್ದಾರೆ.
ಒಂದು ಗ್ರಾಂ ಎಂಡಿಎಂಎ ಕ್ರಿಸ್ಟಲ್ ಅನ್ನು 8 ರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದಾರೆ. ಬಂಧಿತರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.