ವಿಜಯಸಾಕ್ಷಿ ಸುದ್ದಿ, ಗದಗ: ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಭಯೋತ್ಪಾದಕರ 9 ನೆಲೆಗಳನ್ನು ಭಾರತದ ಸೇನೆ ಧ್ವಂಸಗೊಳಿಸಿವ ಮೂಲಕ ಪಾಕಿಸ್ತಾನದ ಉಗ್ರರಿಗೆ ನಮ್ಮ ಹೆಮ್ಮೆಯ ಭಾರತೀಯ ಯೋಧರು ತಕ್ಕ ಪಾಠ ಕಲಿಸಿದ್ದು, ಸಾರ್ವಜನಿಕರ ಪರವಾಗಿ ನಮ್ಮ ಯೋಧರಿಗೆ ನಮನಗಳನ್ನು ಸಲ್ಲಿಸುವದಾಗಿ ಬಿಜೆಪಿ ಯುವ ಮುಖಂಡ ವಸಂತ ಪಡಗದ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ ತಿಂಗಳು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯದಿಂದ ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿ ಅಮಾಯಾಕ ನಾಗರಿಕರನ್ನು ಹತ್ಯೆಗೈದ ಉಗ್ರರಿಗೆ ಇಂದು ನಮ್ಮ ಯೋಧರು ನಡೆಸಿದ ಸಿಂಧೂರ್ ಕಾರ್ಯಾಚರಣೆಯಲ್ಲಿ ಉಗ್ರರ ಶಿಬಿರಗಳನ್ನು ಧ್ವಂಸ ಮಾಡಿದ್ದಾರೆ. ದೇಶಾದ್ಯಂತ ಉಗ್ರವಾದ ಕೊನೆಗೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರ ನಮ್ಮ ಭಾರತೀಯ ಯೋಧರಿಗೆ ಪಕ್ಷ ಭೇದ ಮರೆತು ಬೆಂಬಲ ನೀಡಬೇಕು ಎಂದು ಹೇಳಿದ್ದಾರೆ.