Homecultureಕಲ್ಲಾಪೂರ ಗ್ರಾಮದಲ್ಲಿ ಸಾಂಸ್ಕೃತಿಕ ಸೌರಭ

ಕಲ್ಲಾಪೂರ ಗ್ರಾಮದಲ್ಲಿ ಸಾಂಸ್ಕೃತಿಕ ಸೌರಭ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ನರಗುಂದ ತಾಲೂಕಿನ ಕಲ್ಲಾಪೂರ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ಜರುಗಿತು.

ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತ ಸಿದ್ದೇಶ್ವರ ಶಾಸ್ತ್ರಿಗಳು ತೆಲ್ಲೂರ ಅವರು ಕಥಾಕೀರ್ತನ ಪ್ರಸ್ತುತಪಡಿಸಿದರು. ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠ ಹಾಗೂ ಶಿರೋಳ ತೋಂಟದಾರ್ಯ ಮಠದ ಪೂಜ್ಯ ಶಾಂತಲಿಂಗ ಮಹಾಸ್ವಾಮಿಗಳು ತೆಲ್ಲೂರ ಅವರನ್ನು ಸನ್ಮಾನಿಸಿ ಗೌರವಿಸಿದರು.

ವಿವಿಧ ಸಂಘಟನೆಗಳಿಂದ ಹಾಗೂ ಕಲಾವಿದರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು. ಸಮಾರಂಭದಲ್ಲಿ ಗದಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ವೀರಯ್ಯಸ್ವಾಮಿ, ಶಿರೋಳ ಗ್ರಾ.ಪಂ ಅಧ್ಯಕ್ಷೆ ಹನಮವ್ವ ಹಿರೇಮನಿ, ಉಪಾಧ್ಯಕ್ಷ ಹನಮಂತಗೌಡ ತಿರಕನಗೌಡ್ರ ಸೇರಿದಂತೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಗಣ್ಯರು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!