‘ಡೆವಿಲ್’ ಚಿತ್ರದಿಂದ ಅಕ್ಕನ ಮಗನನ್ನೇ ಹೊರಗಿಟ್ಟ ದರ್ಶನ್: ಕಾರಣವೇನು?

0
Spread the love

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್‌ ಇಂದಿನಿಂದ ಡೆವಿಲ್‌ ಸಿನಿಮಾದ ಶೂಟಿಂಗ್‌ ನಲ್ಲಿ ಭಾಗಿಯಾಗಲಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ದರ್ಶನ್‌ ಮುಖ್ಯವಾದ ಸಂದೇಶವೊಂದನ್ನು ನೀಡಿದ್ದಾರೆ.

Advertisement

‘ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ’. ಅದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ. ಚಂದು ಅಥವಾ ನನ್ನ ಮಗ ವಿನೀಶ್​ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ. ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟ ಆಗುವುದಿಲ್ಲ’ ಎಂದು ದರ್ಶನ್ ಖಡಕ್‌ ಆಗಿ ಹೇಳಿದ್ದಾರೆ.

ಇಂದಿನಿಂದ ಅಂದರೆ ಮಾರ್ಚ್ 12ರಿಂದ 15ರವರೆಗೆ ಮೈಸೂರಿನಲ್ಲಿ ‘ದಿ ಡೆವಿಲ್’ ಚಿತ್ರದ ಶೂಟಿಂಗ್ ನಡೆಸಲು ಕೋರ್ಟ್‌ ಅನುಮತಿ ನೀಡಿದೆ. ಮಾ.12ರಿಂದ ಮಾ.14ರವರೆಗೆ ಸರ್ಕಾರಿ ಅಥಿತಿ ಗೃಹದಲ್ಲಿ ಚಿತ್ರತಂಡ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೂಟಿಂಗ್ ಮಾಡಲಿದ್ದಾರೆ. ಮಾ.15ರಂದು ಲಲಿತಮಹಲ್ ಪ್ಯಾಲೆಸ್‌ನಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಂಡಿದೆ.

ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದು, ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಪೊಲೀಸ್‌ ಸಿಬ್ಬಂದಿಯನ್ನು ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ನಟನ ಭದ್ರತೆಗಾಗಿ  ಸಿಬ್ಬಂದಿ ನಿಯೋಜಿಸಲು 1,64,785 ರೂ. ಹಣವನ್ನು ‘ದಿ ಡೆವಿಲ್’ ಚಿತ್ರತಂಡ ಪಾವತಿಸಿದೆ.


Spread the love

LEAVE A REPLY

Please enter your comment!
Please enter your name here