ಸ್ಯಾಂಡಲ್​ವುಡ್​ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್ ವಿಧಿವಶ!

0
Spread the love

ಬೆಂಗಳೂರು:- ಹೃದಯಾಘಾತದಿಂದ ಸ್ಯಾಂಡಲ್​ವುಡ್​ ಹಿರಿಯ ನಿರ್ಮಾಪಕ ಕೆ. ಪ್ರಭಾಕರ್ ವಿಧಿವಶರಾಗಿದ್ದಾರೆ.

Advertisement

ಹೃದಯಾಘಾತ ಆದ ಬಳಿಕ ಪ್ರಭಾಕರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಇಹಲೋಕ ತ್ಯಜಿಸಿದ್ದಾರೆ. ಕೆ. ಪ್ರಭಾಕರ್​ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಹಿರಿಯ ನಿರ್ಮಾಪಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಸಭ್ಯ ನಿರ್ಮಾಪಕ ಎಂದು ಕೆ. ಪ್ರಭಾಕರ್​ ಅವರು ಗುರುತಿಸಿಕೊಂಡಿದ್ದಾರೆ.

ಅನೇಕ ಸ್ಟಾರ್​ ಕಲಾವಿದರ ಜೊತೆ ಅವರು ಸಿನಿಮಾ ಮಾಡಿದ್ದರು. ಕಾಶಿನಾಥ್​, ಶಿವರಾಜ್​ಕುಮಾರ್​, ವಿಷ್ಣುವರ್ಧನ್​, ಉಪೇಂದ್ರ, ರಾಧಿಕಾ ಕುಮಾರಸ್ವಾಮಿ ಮುಂತಾದ ಕಲಾವಿದರ ಸಿನಿಮಾಗಳಿಗೆ ಕೆ. ಪ್ರಭಾಕರ್​ ಅವರು ಬಂಡವಾಳ ಹೂಡಿದ್ದರು. ಹಲವು ಸಿನಿಮಾಗಳ ಮೂಲಕ ಅವರು ಹೆಸರು ಗಳಿಸಿದ್ದರು.


Spread the love

LEAVE A REPLY

Please enter your comment!
Please enter your name here