ಸ್ಯಾಂಡಲ್‌ವುಡ್‌ನ ಹಿರಿಯ ನಟ 92 ವರ್ಷದ ಟಿ.ತಿಮ್ಮಯ್ಯ ವಿಧಿವಶರಾಗಿದ್ದಾರೆ.
Advertisement
ಟಿ.ತಿಮ್ಮಯ್ಯ ಅವರು, ಖ್ಯಾತ ನಿರ್ದೇಶಕರಾದ ದೊರೆ ಭಗವಾನ್, ಸುನೀಲ್ ಕುಮರ್ ದೇಸಾಯಿ, ಭಾರ್ಗವ ಹೀಗೆ ಹಲವು ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ. ಚಲಿಸುವ ಮೋಡಗಳು, ಬಂಧನ, ಬೆಂಕಿಯ ಬಲೆ, ಕಾಮನಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.
ಡಾ.ರಾಜ್‌ಕುಮಾರ್, ವಿಷ್ಣುವರ್ಧನ್, ಅನಂತ್ ನಾಗ್. ಹೆಸರಾಂತ ನಿರ್ದೇಶಕರಾದ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಭಾರ್ಗವ, ಸಂಗೀತಂ ಶ್ರೀನಿವಾಸ್ ರಾವ್, ಕೆವಿ ಜಯರಾಮ್ ಅವರೊಂದಿಗೆ ಕೆಲಸ ಮಾಡಿದ್ದಾರೆ.
ಇವರ ನಿಧನಕ್ಕೆ ಸಾಕಷ್ಟು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.