HomeGadag Newsಸಿಸಿ ರಸ್ತೆ ಕಾಮಗಾರಿಗೆ ಸಂಗನಗೌಡ ಪಾಟೀಲ ಚಾಲನೆ

ಸಿಸಿ ರಸ್ತೆ ಕಾಮಗಾರಿಗೆ ಸಂಗನಗೌಡ ಪಾಟೀಲ ಚಾಲನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮದ ಅಭಿವೃದ್ಧಿಗೆ ಶಾಸಕ ಜಿ.ಎಸ್. ಪಾಟೀಲ ಬದ್ಧರಾಗಿದ್ದು, ಸಿಸಿ ರಸ್ತೆ, ಚರಂಡಿ, ಶಾಲಾ ಕೊಠಡಿ ಹಾಗೂ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ ಹೇಳಿದರು.

ಸವಡಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ₹20 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮದ ಹಿರಿಯರೊಂದಿಗೆ ಚರ್ಚಿಸಿ ಅಗತ್ಯಕ್ಕೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದು, ಶಾಸಕ ಜಿ.ಎಸ್. ಪಾಟೀಲ ಕ್ಷೇತ್ರಕ್ಕೆ ಹೆಚ್ಚಿನ ಯೋಜನೆಗಳನ್ನು ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಸವಡಿ ಗ್ರಾಮಕ್ಕೂ ಕಳೆದ ಮೂರು ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನ ದೊರೆತಿದ್ದು, ಹಲವು ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿವೆ. ಮಾರನಬಸರಿ ಗ್ರಾಮದಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಯೂ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಲ್ಲನಗೌಡ ಪರಡ್ಡಿ, ಕುಬೇರಗೌಡ ಪರಡ್ಡಿ, ಸೋಮು ನಾಗರಾಜ, ಸುರೇಶ ನಡುವಿನಮನಿ, ಮುತ್ತಣ್ಣ ಹಲಗಿ, ಹುಚ್ಚಿರಪ್ಪ ಮಾದರ, ಶಂಭು ಮೆಣಸಗಿ, ಅನಿಲ ಮಂಗಳೂರ, ಉಮೇಶ ಗೇದಗೆರಿ, ಶಿವು ಕಂಬಳಿ, ರವಿ ಶಿವಪೂಜೆ, ಮಲ್ಲಪ್ಪ ನಿಡಗುಂದಿ, ಸುರೇಶ ಹಲಗಿ, ಮಾಂತೇಶ ಹಕ್ಕಿ, ಶರಣಪ್ಪ ದೊಡ್ಡಮನಿ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img