ವಿಜಯಪುರ: ಕಿಡಿಗೇಡಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪೊಟೋಗೆ ಚಪ್ಪಲಿ ಹಾರ ಹಾಕಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಹಗರಗುಂಡ ಗ್ರಾಮದಲ್ಲಿ ನಡೆದಿದೆ. ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿರುವ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು,
ಇಂದು ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬರುತ್ತಲೇ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳೀಯ ಯುವಕರು ಚಪ್ಪಲಿ ಹಾರ ತೆರವುಗೊಳಿಸಿದ್ದಾರೆ. ತಾಳಿಕೋಟಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಾನಿಕ ವಿಚಾರಣೆ ಆರಂಭಿಸಿದ್ದಾರೆ.



