ನವದೆಹಲಿ:- 26ನೇ RCB ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ನಾಳೆಯಿಂದ ಮೂರು ವರ್ಷಗಳ ಅವಧಿಗೆ ಆರ್ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಲಿರುವ ಮಲ್ಹೋತ್ರಾ ಅವರ ಹೆಸರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.
ಕಂದಾಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಜಯ್ ಮಲ್ಹೋತ್ರಾ ಅವರು ತನ್ನ 33 ವರ್ಷಗಳ ವೃತ್ತಿಜೀವನದಲ್ಲಿ, ಶ್ರೀ ಮಲ್ಹೋತ್ರಾ ಅವರು ವಿದ್ಯುತ್, ಹಣಕಾಸು ಮತ್ತು ತೆರಿಗೆ, ಮಾಹಿತಿ ತಂತ್ರಜ್ಞಾನ, ಗಣಿಗಳು ಇತ್ಯಾದಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆಗಳಿಗೆ ತೆರಿಗೆ ನೀತಿ ರೂಪಿಸುವಲ್ಲಿ ಸಂಜಯ್ ಮಲ್ಹೋತ್ರಾ ಪ್ರಮುಖ ಪಾತ್ರವಹಿಸಿದ್ದಾರೆ.
ಇಲ್ಲಿಯವರೆಗೆ ಶಕ್ತಿಕಾಂತ ದಾಸ್ ಅವರು ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಅಂದರೆ, ಡಿಸೆಂಬರ್ 10ರಂದು ಅವರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದೆ. ದಾಸ್ ಅವರು ಊರ್ಜಿತ್ ಪಟೇಲ್ ಹಠಾತ್ ನಿರ್ಗಮನದ ಬಳಿಕ ಡಿಸೆಂಬರ್ 12, 2018ರಂದು ಆರ್‌ಬಿಐನ 25ನೇ ಗವರ್ನರ್ ಆಗಿ ನೇಮಕಗೊಂಡಿದ್ದರು. ಈಗ ಆರ್‌ಬಿಐನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕಗೊಂಡಿದ್ದಾರೆ.