ಚಿಕ್ಕಮಗಳೂರು:- ಒಂದೆಡೆ ನಾಡಿನಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮತ್ತೊಂದೆಡೆ ಕಾಫಿನಾಡಲ್ಲಿ ವರ್ಷದ ಮೊದಲ ಮಳೆ ಆಗಿದ್ದು, ರೈತರಲ್ಲಿ ಖುಷಿಯ ಜೊತೆ ಆತಂಕ ಮೂಡಿಸಿದೆ.
Advertisement
ಎಸ್, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಸೋಮವಾರ ರಾತ್ರಿ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ದಿಢೀರ್ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಕೊಟ್ಟಿಗೆಹಾರ, ಬಾಳೂರು, ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸುತ್ತಮುತ್ತ ಮಳೆ ಸುರಿದಿದೆ. ಮಲೆನಾಡು ಭಾಗದಲ್ಲಿ ಈಗ ಕಾಫಿ ಕೊಯ್ಯಲಾಗುತ್ತಿದೆ. ಈ ಸಂದರ್ಭದಲ್ಲಿ ಮಳೆಯಾಗಿದ್ದರಿಂದ ಬೆಳೆಗಾರರು ಆತಂಕದಲ್ಲಿದ್ದಾರೆ.