ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಕೆ.ಎಚ್. ಪಾಟೀಲ ಸೆಂಟರ್ ಫಾರ್ ಹ್ಯೂಮನ್ ಎಕ್ಸಲೆನ್ಸ್, ಸ್ವಾಮಿ ವಿವೇಕಾನಂದ ಪಿ.ಯು. ಮಹಾವಿದ್ಯಾಲಯ ಹುಲಕೋಟಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ 2024–25ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜಯಶಾಲಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ 1500 ಮೀ. ಓಟದಲ್ಲಿ ಮನುಶ್ರೀ ಕುರ್ತಕೋಟಿ ದ್ವಿತೀಯ ಸ್ಥಾನ, ಕರಾಟೆ ವಿಭಾಗದ -44 ಕೆ.ಜಿ. ಸ್ಪರ್ಧೆಯಲ್ಲಿ ಹರ್ಷಿತಾ ಬಾಕಳೆ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ 58 ಕೆ.ಜಿ. ಸ್ಪರ್ಧೆಯಲ್ಲಿ ವಿಜ್ಞಾನ ಸಾಹಿಲ್ ವೇರ್ಣೆಕರ್ ಪ್ರಥಮ ಸ್ಥಾನ, ಈಜು ಸ್ಪರ್ಧೆಯಲ್ಲಿ 50 ಮೀ ಫ್ರೀ ಸ್ಟೈಲ್, 100 ಮೀ – ಫ್ರೀ ಸ್ಟೈಲ್, 100 ಮೀ-ಬ್ರೆತ್ ಸ್ಟ್ರೋಕ್, ಹಾಗೂ ರಿಲೆ ವಿಭಾಗಗಳಲ್ಲಿ ಅಮೋಘ ಹಿರೇಮಠ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಎಲ್ಲ ಕ್ರೀಡಾಪಟುಗಳಿಗೆ ಸಂಸ್ಥೆಯ ಚೇರಮನ್ ಪ್ರೊ.ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ, ನಿರ್ದೇಶಕರಾದ ಪ್ರೊ.ರೋಹಿತ, ಪ್ರೊ. ರಾಹುಲ್ ಒಡೆಯರ, ಪ್ರೊ.ಪುನೀತ ದೇಶಪಾಂಡೆ, ಪ್ರೊ.ಸೈಯ್ಯದ್ ಮತಿನ್ ಮುಲ್ಲಾ ಸೇರಿದಂತೆ ಕಾಲೇಜಿನ ಎಲ್ಲ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.