ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸ್ಟುಡೆಂಟ್ ಎಜ್ಯುಕೇಶನ್ ಸಂಸ್ಥೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಅಂಗಡಿ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 94.67ರಷ್ಟು ಅಂಕಗಳನ್ನು ಪಡೆಯುವುದರ ಜೊತೆಗೆ ಗಣಿತಶಾಸ್ತ್ರದಲ್ಲಿ 100ಕ್ಕೆ 100 ಅಂಕಗಳನ್ನು ಗಳಿಸಿ ವಿದ್ಯಾಲಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾನೆ.
ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ವತಿಯಿಂದ ಹೃತ್ಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಸದಸ್ಯರಾದ ಪ್ರೊ. ರೋಹಿತ ಒಡೆಯರ್, ಪ್ರೊ. ರಾಹುಲ್ ಒಡೆಯರ್ ಹಾಗೂ ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ ಹಾಗೂ ಕಾಲೇಜಿನ ಸಮಸ್ತ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದರು.
ಬೋಧಕರಾದ ಪ್ರೊ. ಪುನೀತ ದೇಶಪಾಂಡೆ, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ಪರಶುರಾಮ ಕೊಟ್ನೆಕಲ್, ಪ್ರೊ. ಶಿವಕುಮಾರ ವಜ್ರಬಂಡಿ ಮತ್ತು ಪ್ರೊ. ಸಂಗೀತಾ ಬೀಳಗಿ ಮುಂತಾದವರು ಪಾಲ್ಗೊಂಡಿದ್ದರು.