ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿದ ಪಂಚ ಗ್ಯಾರಂಟಿಗಳ ಬಗ್ಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು. ಬ್ರಿಟನ್‌ನ ಹೌಸ್ ಆಫ್ ಲಾರ್ಡ್ಸ್‌ನಲ್ಲಿ ನಡೆದ ಇಂಡೋ -ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಮುಖ್ಯ ಭಾಷಣಕಾರರಾಗಿ ಸಂತೋಷ್ ಲಾಡ್ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿದ ಪಂಚ ಗ್ಯಾರಂಟಿಗಳ ಬಗ್ಗೆ ವಿವರಿಸಿದ ಸಚಿವ ಲಾಡ್ ಅವರು, ಈ ಕಾರ್ಯಕ್ರಮಗಳನ್ನು ನಮ್ಮ ದೇಶದ ಇತರ ರಾಜ್ಯಗಳಲ್ಲದೇ, ವಿಶ್ವದ ಹಲವು ದೇಶಗಳಿಗೆ ಸಹ ಮಾದರಿಯಾಗಿ ಪರಿಗಣಿಸಿವೆ. ಇದೊಂದು ಅಭೂತಪೂರ್ವವಾದ ಕಾರ್ಯಕ್ರಮ.
ಈ ಕಾರ್ಯಕ್ರಮಗಳಿಗೆ ಪ್ರತಿ ವರ್ಷ 12 ಬಿಲಿಯನ್ ಡಾಲರ್ ಅನ್ನು ಖರ್ಚು ಮಾಡಲಾಗುತ್ತಿದೆ. ಬಡ ಜನರಿಗೆ ಸಾಮಾಜಿಕ ಸೇವಾ ಯೋಜನೆಗಳನ್ನು ನೀಡಲಾಗುತ್ತಿದೆ. ಇದರಿಂದ ನಮ್ಮ ಕರ್ನಾಟಕ ರಾಜ್ಯದ ಜಿಡಿಪಿ ಸಹ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಇಂತಹ ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು ಎಂದು ಹೇಳಿದರು.