HomeKarnataka Newsಸರೋಜಕ್ಕ ಅಗಲಿಕೆ ನನಗೆ ವೈಯಕ್ತಿಕವಾಗಿ ಬಹಳ ನೋವು ತಂದಿದೆ: ಬೊಮ್ಮಾಯಿ ಸಂತಾಪ

ಸರೋಜಕ್ಕ ಅಗಲಿಕೆ ನನಗೆ ವೈಯಕ್ತಿಕವಾಗಿ ಬಹಳ ನೋವು ತಂದಿದೆ: ಬೊಮ್ಮಾಯಿ ಸಂತಾಪ

For Dai;y Updates Join Our whatsapp Group

Spread the love

ಬೆಂಗಳೂರು: ಸರೋಜಕ್ಕ ಅಗಲಿಕೆ ನನಗೆ ವೈಯಕ್ತಿಕವಾಗಿ ಬಹಳ ನೋವು ತಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೆ.ಪಿ. ನಗರದ ನಿವಾಸದಲ್ಲಿ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ರವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರೋಜಕ್ಕ ತಾಯಿ ಮಮತೆಯ ಸ್ವರೂಪಿಣಿ ಆಗಿದ್ದರು. ಮನೆಗೆ ಬರುವರಿಗೆಲ್ಲ ಆದರತೆ ತೋರುತ್ತಿದ್ದರು. ಅವರು ಸಾಕ್ಷಾತ್ ಅನ್ನಪೂರ್ಣೆಶ್ವರಿಯೇ ಆಗಿದ್ದರು.

ಹಲವು ವರ್ಷಗಳ ಕಾಲ ಅವರು ಮನೆಗೆ ಹೋದಾಗೆಲ್ಲ ಊಟ, ಉಪಚಾರ ಮಾಡಿ ಪ್ರೀತಿಯಿಂದ ಮಾತನಾಡುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ. ಸರೋಜ ಅವರ ಅಗಲಿಕೆ ನನಗೆ ವೈಯಕ್ತಿಕವಾಗಿ ಬಹಳ ನೋವು ತಂದಿದೆ. ಈಗ ನಾನು ಅವರ ಮನೆಗೆ ಹೋಗಿ, ಅಂತಿಮ ದರ್ಶನ ಪಡೆಯುತ್ತೇನೆ. ಸುದೀಪ್ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

 

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!