ಸತೀಶ್ ಜಾರಕಿಹೊಳಿ- ಬಿ ವೈ ವಿಜಯೇಂದ್ರ ಭೇಟಿ ವಿಚಾರ: ಬಸವರಾಜ್ ಬೊಮ್ಮಾಯಿ ಹೇಳಿದ್ದೇನು..?

0
Spread the love

ಗದಗ: ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡ್ತಿದ್ದಾರೆ.

Advertisement

ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ, ನೋಡಿದ್ರೆ ಗೊತ್ತಾಗುತ್ತದೆ ಎಂದರು. ಸಿಎಂ ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಸರ್ಕಾರ ಬರುವುದಿಲ್ಲ, ನಮಗೆ ಅವಕಾಶ ಇದೆ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ, ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ ಎಂದು ಹೇಳಿದರು.

ಇನ್ನೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ಮಾಡಿರುವ ಕುರಿತು ಮಾತನಾಡಿದ ಅವರು, ಬೇರೆ ಯಾವುದೇ ಕೆಲಸಕ್ಕೆ ಭೇಟಿಯಾಗಿರಬಹುದು. ನಮ್ಮ‌ ಹೈಕಮಾಂಡ್ ಬಹಳ ಸ್ಪಷ್ಟವಾಗಿದೆ. ಈ ಸರ್ಕಾರ ಅಭದ್ರಗೊಳಿಸುವ ಪ್ರಶ್ನೆ ಇಲ್ಲ.

ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ಎಂದರು.ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರ್ಕಾರದ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಆದರೆ, ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡುವುದಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಸೇರಿದಂತೆ ಅನೇಕ ಮುಖಂಡರು ಇದ್ದರು.


Spread the love

LEAVE A REPLY

Please enter your comment!
Please enter your name here