ಮೈಸೂರು: ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್ ಜಾರಕಿಹೊಳಿ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಂದೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18 ಶಾಸಕರ ಬೆಂಬಲವನ್ನು ಅವರು ಕೇಳಿರಬಹುದು.
Advertisement
ರಾಜಕಾರಣದಲ್ಲಿ ಏನುಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿ ನೋಡಿದ್ರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರಲು ಸಾಧ್ಯವಿಲ್ಲ ಎಂದಿದ್ದಾರೆ.
ಜಾರಕಿಹೊಳಿಯವರು ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದರೆ ಅದಕ್ಕೆ ಇದೇ ಕಾರಣ. ಒಂದು ವೇಳೆ ಜೆಡಿಎಸ್ ಅವರಿಗೆ ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಈ ವಿಚಾರದಲ್ಲಿ ಮಾತ್ರ ನಾನು ತಟಸ್ಥ ಅಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.