ವಿಜಯಸಾಕ್ಷಿ ಸುದ್ದಿ, ಗದಗ: ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಸತ್ಯಮ್ಮದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯೊಂದಿಗೆ ಜರುಗಿತು. ಜಾತ್ರಾ ಮಹೋತ್ಸವದ ಅಂಗವಾಗಿ ಸತ್ಯಮ್ಮದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹಾರೋಗೇರಿ ಸೇರಿ ಸುತ್ತಮುತ್ತಲಿನ ಗ್ರಾಮಸ್ಥರು ದೇವಿಯ ದರ್ಶನಾಶೀರ್ವಾದ ಪಡೆದರು.
Advertisement
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕಲಾವಿದೆ ಸುಮಂಗಲಾ ಪೂಜಾರ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಮತ್ತು ಶ್ರೀ ಸತ್ಯಮ್ಮದೇವಿ ಬಯಲಾಟ ಸಂಘದಿಂದ “ರಕ್ತರಾತ್ರಿ ಅರ್ಥಾತ್ ವೀರ ಅಶ್ವತ್ಥಾಮ” ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.