HomeBengaluru Newsಸೌಜನ್ಯ ಅತ್ಯಾಚಾರ & ಕೊಲೆ ಕೇಸ್: ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಲೋಕೇಶ್ ಬಿ. ಜಗಲಾಸರ್...

ಸೌಜನ್ಯ ಅತ್ಯಾಚಾರ & ಕೊಲೆ ಕೇಸ್: ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಲೋಕೇಶ್ ಬಿ. ಜಗಲಾಸರ್ ನೇಮಕ

For Dai;y Updates Join Our whatsapp Group

ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ಮಹತ್ವದ ನಿರ್ಧಾರ ಕೈಗೊಂಡಿದೆ.

ಪ್ರಕರಣದ ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಲೋಕೇಶ್ ಬಿ. ಜಗಲಾಸರ್ ಅವರನ್ನು ಎಸ್‌ಐಟಿ ಮುಖ್ಯಸ್ಥ ಎನ್. ಶಶಿಕುಮಾರ್ ನೇಮಿಸಿದ್ದಾರೆ.

ಪ್ರಕರಣದ ಗಂಭೀರತೆ ಹಾಗೂ ತನಿಖೆಯ ತೀವ್ರತೆಯನ್ನು ಪರಿಗಣಿಸಿ ನಡೆದ ಎಸ್‌ಐಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತನಿಖಾಧಿಕಾರಿ ಲೋಕೇಶ್ ಬಿ. ಜಗಲಾಸರ್ ಅವರಿಗೆ ಸಹಾಯಕ ತನಿಖಾಧಿಕಾರಿಯಾಗಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರನ್ನು ನೇಮಕ ಮಾಡಲಾಗಿದೆ.

ಹೀಗಾಗಿ ಪ್ರಕರಣದ ತನಿಖೆಯನ್ನು ಓರ್ವ ಐಪಿಎಸ್ ಹಾಗೂ ಓರ್ವ ಕೆಎಸ್‌ಪಿಎಸ್ ಅಧಿಕಾರಿಗಳ ತಂಡ ನಡೆಸಲಿದೆ.

ಲೋಕೇಶ್ ಬಿ. ಜಗಲಾಸರ್ ಈ ಹಿಂದೆ ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಬೆಂಗಳೂರು ನಗರದಲ್ಲಿ ಡಿಸಿಪಿಯಾಗಿಯೂ ಸೇವೆ ಸಲ್ಲಿಸಿದ್ದು, ಪ್ರಸ್ತುತ ಸಿಐಡಿಯಲ್ಲಿ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸೌಜನ್ಯ ಪ್ರಕರಣದ ತನಿಖೆಗೆ ತಾಂತ್ರಿಕ ಸಾಮರ್ಥ್ಯ ಹೊಂದಿರುವ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕೇಶ್ ಅವರ ನೇಮಕಕ್ಕೆ ಮಹತ್ವ ನೀಡಲಾಗಿದೆ.

ಲೋಕೇಶ್ ಬಿ. ಜಗಲಾಸರ್ ಅವರು ಎಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದಿದ್ದ ₹7 ಕೋಟಿ ದರೋಡೆ ಪ್ರಕರಣಗಳ ತನಿಖೆಯ ನೇತೃತ್ವವನ್ನೂ ಅವರು ವಹಿಸಿದ್ದರು. ಆ ಪ್ರಕರಣದಲ್ಲಿ ದರೋಡೆಯಾಗಿದ್ದ ಸಂಪೂರ್ಣ ಹಣವನ್ನು ಅವರ ನೇತೃತ್ವದ ತಂಡ ಎರಡು ದಿನಗಳಲ್ಲೇ ವಶಪಡಿಸಿಕೊಂಡಿತ್ತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img