ಬೆಂಗಳೂರು: ಸಾವರ್ಕರ್ ಮೂಲಭೂತವಾದಿಯಾಗಿದ್ದರು ಎನ್ನುವುದರಲ್ಲಿ ಸಂಶಯವಿಲ್ಲ. ಮೂಲಭೂತವಾದ ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಾವರ್ಕರ್ ಮೂಲಭೂತವಾದಿಯಾಗಿದ್ದರು ಎನ್ನುವುದರಲ್ಲಿ ಸಂಶಯವಿಲ್ಲ. ಮೂಲಭೂತವಾದ ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲ.
ಇದು ಯುರೋಪ್‌ನಿಂದ ಬಂದಿರುವಂತದ್ದು. ಸಾವರ್ಕರ್ ಯೂರೋಪ್‌ನಿಂದ ಸಾಕಷ್ಟು ಪ್ರಭಾವ ಹೊಂದಿದ್ದರು. ಜೊತೆಗೆ ಬ್ರಾಹ್ಮಣ ಸಮಾಜದ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು. ಮಾಂಸಹಾರ ಸೇವನೆಯನ್ನು ಅವರು ಬಹಿರಂಗವಾಗಿ ಸಮರ್ಥಿಸುತ್ತಿದ್ದರು. ಆದರೆ ಗಾಂಧೀಜಿಯವರು ಸಸ್ಯಾಹಾರಿ. ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು ಎಂದರು.



