HomeGadag Newsಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ: ನಾಗರಾಜ ಮಾಡಳ್ಳಿ

ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ: ನಾಗರಾಜ ಮಾಡಳ್ಳಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬೈಕ್ ಸವಾರಿ ಮಾಡಬೇಕು. ಇದರಿಂದ ತಮ್ಮ ಜೀವ ಉಳಿಸಿಕೊಳ್ಳಲು ಸಾಧ್ಯವಾಗುವುದರ ಜೊತೆಗೆ ಸಂಚಾರಿ ನಿಯಮಗಳನ್ನು ಸಹ ಪಾಲಿಸಬೇಕೆಂದು ಶಿರಹಟ್ಟಿ ವೃತ್ತ ಆರಕ್ಷಕ ನಿರೀಕ್ಷಕ ನಾಗರಾಜ ಮಾಡಳ್ಳಿ ಹೇಳಿದರು.

ಅವರು ಗುರುವಾರ ಶಿರಹಟ್ಟಿಯ ನೆಹರು ವೃತ್ತದಲ್ಲಿ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಹೆಲ್ಮೆಟ್ ಜಾಗೃತಿ ಕುರಿತ ಅಭಿಯಾನ ಕಾರ್ಯಕ್ರಮದಲ್ಲಿ ಬೈಕ್ ಸವಾರರಿಗೆ ಜಾಗೃತಿ ಮೂಡಿಸಿದರಲ್ಲದೆ, ಕೆಲವರಿಗೆ ಉಚಿತವಾಗಿ ಹೆಲ್ಮೆಟ್‌ನ್ನು ನೀಡಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಬೈಕ್ ಸವಾರರು ಅಪಘಾತದ ಸಂದರ್ಭಗಳಲ್ಲಿ ಸಾವನ್ನಪ್ಪುತ್ತಿರುವುದು ವಿಷಾದನೀಯ. ಇಂತಹ ಸಮಯದಲ್ಲಿ ಹೆಲ್ಮೆಟ್ ಧರಿಸಿದರೆ ಜೀವವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಬೈಕ್ ಸವಾರರೂ ಹೆಲ್ಮೆಟ್ ಧರಿಸಬೇಕು, ಜೊತೆಗೆ ಹಿಂಬದಿ ಸವಾರರು ಸಹ ಹೆಲ್ಮೆಟ್ ಧರಿಸಬೇಕು. ಇದನ್ನು ಪಾಲನೆ ಮಾಡದಿರುವವರಿಗೆ ಕಾನೂನಿನ ಪ್ರಕಾರ ದಂಡ ವಿಧಿಸಲಾಗುವುದು. ಇದಕ್ಕೆ ಅವಕಾಶ ನೀಡದೇ ನಿಮ್ಮ ಸುರಕ್ಷತೆಯ ಸಲುವಾಗಿ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕೆಂದು ಹೇಳಿದರು.

ಪಿಎಸ್‌ಐ ಚನ್ನಯ್ಯ ದೇವೂರ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!