• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

Vijaya Sakshi News Desk by Vijaya Sakshi News Desk
November 5, 2026
in Gadag News
ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ
0
SHARES
154
VIEWS
Share on Facebook

ಗದಗ: ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಇಂಡಿಯಾ ಒಕ್ಕೂಟದ ಪಕ್ಷಗಳ ನೇತೃತ್ವದಲ್ಲಿ ಗುರುವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನದಡಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಮತದಾರರ ಪಟ್ಟಿಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಪ್ರಜಾಪ್ರಭುತ್ವದ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು. ಪ್ರತಿಯೊಬ್ಬ ಅರ್ಹ ಮತದಾರನ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಬೇಕು. ಅರ್ಹರ ಹೆಸರು ಕೈಬಿಡದಂತೆ ಹಾಗೂ ಅನರ್ಹರ ಹೆಸರು ಸೇರ್ಪಡೆಯಾಗದಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಾಸಪ್ಪ ಕುರುಡಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಮತವೇ ಅತ್ಯಂತ ದೊಡ್ಡ ಶಕ್ತಿಯಾಗಿದೆ. ಮತದಾನದ ಹಕ್ಕಿಗೆ ಧಕ್ಕೆಯಾಗುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹ ಮತದಾರನಿಗೂ ತನ್ನ ಹಕ್ಕು ಚಲಾಯಿಸುವ ಅವಕಾಶ ದೊರೆಯಬೇಕು. ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಜನರೊಂದಿಗೆ ನಿಂತು ಹೋರಾಟ ನಡೆಸಲಿದೆ ಎಂದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಮಾತನಾಡಿ, ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟದಲ್ಲಿ ಯುವಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮತದಾನದ ಹಕ್ಕು ಕೇವಲ ಚುನಾವಣೆಯ ಒಂದು ದಿನದ ಪ್ರಕ್ರಿಯೆಯಲ್ಲ. ಅದು ಸಂವಿಧಾನ ನೀಡಿರುವ ಅಮೂಲ್ಯ ಹಕ್ಕು. ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಹಕ್ಕಿನ ರಕ್ಷಣೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕು ಎಂದು ಕರೆ ನೀಡಿದರು.

ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಪ್ರಜಾಪ್ರಭುತ್ವದ ಬುನಾದಿಯಾಗಿರುವ ಚುನಾವಣಾ ವ್ಯವಸ್ಥೆಯ ಮೇಲೆ ಜನರ ವಿಶ್ವಾಸ ಉಳಿಯಬೇಕಾದರೆ ಮತದಾರರ ಪಟ್ಟಿ ಪಾರದರ್ಶಕವಾಗಿರಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ಇರಬಾರದು. ಸಂವಿಧಾನಾತ್ಮಕ ಸಂಸ್ಥೆಗಳು ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆಯಾದಾಗ ಕಾಂಗ್ರೆಸ್ ಪಕ್ಷ ಜನರ ಧ್ವನಿಯಾಗಿ ಹೋರಾಟ ನಡೆಸಲಿದೆ ಎಂದರು.

ಮುಖಂಡರಾದ ಹುಮಾಯೂನ್ ಮಾಗಡಿ ಹಾಗೂ ಎಸ್.ಎನ್. ಬಳ್ಳಾರಿ ಸೇರಿದಂತೆ ಹಲವರು ಮಾತನಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಬಸವರಾಜ ಸುಂಕಾಪೂರ, ಪ್ರವೀಣ ಯಾವಗಲ್ಲ, ಡಿ.ಡಿ. ಮೋರನಾಳ, ಉಮರ್ ಫಾರೂಕ್ ಹುಬ್ಬಳ್ಳಿ, ಲಕ್ಷ್ಮಿ ಸಿದ್ಧಮ್ಮನಹಳ್ಳಿ, ಶಕುಂತಲಾ ಅಕ್ಕಿ, ವಾಣಿ ಹಿರೇಮಠ, ಅನ್ವರ ನದಾಫ್, ಮಹೇಶ ನೀಲಗುಂದ, ಮುನ್ನಾ ಡಾಲಾಯತ, ಎಸ್.ಡಿ. ಮಕಾಂದಾರ, ಪ್ರಕಾಶ ಕರಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎನ್‌ಎಸ್‌ಯುಐ ಹಾಗೂ ವಿವಿಧ ಮುಂಚೂಣಿ ಘಟಕಗಳ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags: congress protestGadagkannadanewsKarnatakaKarnataka CongressVijayasakshiVijayasakshinewVote Bachao Desh Bachao
ShareSendShare
Previous Post

ಚಿಕ್ಕಮಗಳೂರಿನಲ್ಲಿ ನಕಲಿ ಜೇನುತುಪ್ಪ ದಂಧೆ ಬಯಲು; ಬೆಲ್ಲದ ಪಾಕದಲ್ಲಿ ಜೇನುಗೂಡು ನೆನೆಸಿ ಮಾರಾಟ!

Next Post

ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

November 5, 2026
ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

November 5, 2026
ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper