HomeGadag Newsಸಮಾವೇಶದಿಂದ ಹಣ, ಸಮಯದ ಉಳಿತಾಯ

ಸಮಾವೇಶದಿಂದ ಹಣ, ಸಮಯದ ಉಳಿತಾಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕುರುಬ ಸಮಾಜದಲ್ಲಿ ವಧು-ವರರ ಅನ್ವೇಷಣೆ ಇಂದು ಕಷ್ಟದಾಯಕವಾಗಿರುವದರಿಂದ ಇಂತಹ ಸಮಾವೇಶದಿಂದ ಪಾಲಕರಿಗೆ ಒಂದೇ ವೇದಿಕೆಯಲ್ಲಿ ಹಲವಾರು ಅವಕಾಶಗಳು ಲಭ್ಯವಾಗಿ, ಹಣ ಮತ್ತು ಸಮಯದ ಉಳಿತಾಯವಾಗಲಿದೆ ಎಂದು ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕಿರಪ್ಪ ಹೆಬಸೂರ ಹೇಳಿದರು.

ನಗರದ ಶ್ರೀ ಕನಕ ಭವನದಲ್ಲಿ ಹಾಲುಮತ ಮಹಾಸಭಾ ಗದಗ ಜಿಲ್ಲಾ ಘಟಕ ಹಾಗೂ ಕುರುಬರ ಸಂಘ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಜರುಗಿದ 7ನೇ ರಾಜ್ಯಮಟ್ಟದ ವಧು-ವರರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಮಾತನಾಡಿ, ವಧುವಿಗೆ ವರ ಹಾಗೂ ವರನಿಗೆ ವಧುವಿನ ಆಯ್ಕೆ ಬದುಕಿನ ಪ್ರಮುಖ ಘಟ್ಟವಾಗಿದೆ. ಇದರಿಂದ ಪಾಲಕರಿಗೆ ಅನುಕೂಲವಾಗಲೆಂದು 7ನೇ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಕುರಿಗಾರರಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೆ ವಧು-ವರರ ಆಯ್ಕೆಗಾಗಿ ಆಗಮಿಸಿದ್ದಾರೆ. ಈ ಕಾರ್ಯಕ್ರಮದ ಯಶಸ್ವಿಗೆ ಸಮಾಜದ ಗುರು-ಹಿರಿಯರ ಕೊಡುಗೆ ಸಾಕಷ್ಟಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ, ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷ ಡಾ. ಬಿ.ಎಫ್. ದಂಡಿನ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಸ್ಲಂ ಬೋರ್ಡ್ನ ರಾಜ್ಯ ನಿರ್ದೇಶಕ ರಾಮಕೃಷ್ಣ ರೊಳ್ಳಿ ಅವರನ್ನು ಸನ್ಮಾನಿಸಲಾಯಿತು.

ಸಮಾವೇಶದಲ್ಲಿ ಮಹಾರಾಷ್ಟ್ರ, ಬೆಂಗಳೂರು, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೊಟ, ಚಾಮರಾಜನಗರ, ಡಾವಣಗೇರಿ, ಕಾರವಾರ, ಕೊಪ್ಪಳ, ಬಳ್ಳಾರಿ, ಹೊಸಪೇಟೆ, ಹುಬ್ಬಳ್ಳಿ-ಧಾರವಾಡ, ತುಮಕೂರ ಸೇರಿದಂತೆ ಗದಗ ಜಿಲ್ಲೆಯ ವಿವಿಧ ಭಾಗಗಳಿಂದ 156ಕ್ಕೂ ಹೆಚ್ಚು ವಧು-ವರರು ಆಗಮಿಸಿದ್ದರು.

ವೇದಿಕೆಯ ಮೇಲೆ ಹುಲ್ಲೂರು ಅಮೋಘಿಮಠದ ಪೂಜ್ಯಶ್ರೀ ಸಿದ್ದಯ್ಯ ಸ್ವಾಮಿಗಳು, ವೈ.ಡಿ. ಜಡದೆಲಿ, ಕುರುಬರ ಸಂಘದ ತಾಲೂಕಾಧ್ಯಕ್ಷ ನಾಗಪ್ಪ ಗುಗ್ಗರಿ, ಹಾಲುಮತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಸುವರ್ಣ ನಾಗರಾಳ, ಉಮಾ ದ್ಯಾವನೂರ, ಹಾಲಪ್ಪ ಹೊಂಬಳ, ಜಿಲ್ಲಾ ಗೌರವಾಧ್ಯಕ್ಷ ನಾಗರಾಜ ಮೆಣಸಗಿ, ಜಿಲ್ಲಾಧ್ಯಕ್ಷ ಬಸವರಾಜ ನೀಲಗಾರ, ಸೋಮನಗೌಡ ಪಾಟೀಲ, ಮುತ್ತು ಜಡಿ, ರಾಘು ವಗ್ಗನವರ, ಸತೀಶ ಗಿಡ್ಡಹನುಮಣ್ಣವರ, ಕುಮಾರ ಮಾರನಬಸರಿ, ಮಲ್ಲೇಶ ಬಿಂಗಿ ಮುಂತಾದವರು ಉಪಸ್ಥಿತರಿದ್ದರು.

ಶಿಲ್ಪಾ, ಸೌಮ್ಯಾ ಹಾಗೂ ಸಂಜನಾ ಪ್ರಾರ್ಥಿಸಿದರು. ಮೋಹನ ಇಮರಾಪೂರ ಕಾರ್ಯಕ್ರಮ ನಿರೂಪಿಸಿದರು.

ನಿವೃತ್ತ ಪೊಲೀಸ್ ಅಧಿಕಾರಿ ಡಿ.ಡಿ. ಮಾಳಗಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಈ ಸಮಾವೇಶ ಕೌಟುಂಬಿಕ ಕಾರ್ಯಕ್ರಮವಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಗದಗ ಜಿಲ್ಲೆಯಲ್ಲಿ ಸಮಾಜ ಬಾಂಧವರು ವಧು-ವರರಿಗೆ ಉಡಿ ತುಂಬುವ ಮೂಲಕ ಗೌರವಿಸುತ್ತಿರುವದು ಹೆಮ್ಮೆಯ ಸಂಗತಿಯಾಗಿದೆ. ನಮ್ಮಲ್ಲಿ ಉಪ ಪಂಗಡಗಳಲ್ಲಿ ತಾರತಮ್ಯವಿದೆ. ಅದೇರೀತಿ ಬೇರೆ ಸಮುದಾಯದಲ್ಲಿ ಉಪ ಪಂಗಡಗಳನ್ನು ಮರೆತು ಒಂದಾಗುತ್ತಿರುವ ಸಮಯದಲ್ಲಿ ನಾವು ಕೂಡಾ ತಾರತಮ್ಯ ಮರೆತು ನಾವೆಲ್ಲರೂ ಕುರುಬರು ಎಂದು ಸಮಾಜವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!