ಬೆಂಗಳೂರು:- ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಸಾಧ್ಯವೇ ಇಲ್ಲ. ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನಗಣತಿ ನಡೆಯುತ್ತಿದೆ. ಆಗುತ್ತಿರುವ ಅನಾಹುತಗಳ ಬಗ್ಗೆ ಮಾಧ್ಯಮಗಳು ತಿಳಿಸುತ್ತಿವೆ. ನಮ್ಮ ಮನೆಗೂ ಯಾರೂ ಬಂದಿಲ್ಲ. ಆದರೆ, ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪರಿಶಿಷ್ಟ ಜಾತಿಯವರ ಮನೆಗೆ ಬಂದು ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ. ಅದನ್ನು ನಾವು ಒಪ್ಪಬಹುದಿತ್ತು. ಎಲ್ಲ ಮನೆಗಳಿಗೂ ಸ್ಟಿಕ್ಕರ್ ಅಂಟಿಸಿಕೊಂಡು ಹೋಗುತ್ತಿದ್ದಾರೆ. ಆನ್‌ಲೈನ್‌ನಲ್ಲೂ ಅವಕಾಶ ಇದೆ ಎಂದು ಸಿಎಂ ಹೇಳಿದ್ದಾರೆ. ಆದರೆ, ಅಲ್ಲಿ ಪರಿಶಿಷ್ಟ ಜಾತಿ ಸರ್ಟಿಫಿಕೇಟ್ ನಂಬರ್ ಹೇಳಬೇಕು. ಬೇರೆ ಬೇರೆ ಮಾಹಿತಿ ಕೇಳುತ್ತದೆ. ಅದನ್ನು ಒದಗಿಸಲು ಸಾಧ್ಯವೇ ಇಲ್ಲ. ಎಲ್ಲರೂ ವಿದ್ಯಾವಂತರಲ್ಲ, ಕೆಲವರಿಗೆ ಸರ್ಟಿಫಿಕೇಟ್ ಇದೆ. ಇನ್ನೂ ಕೆಲವರಿಗೆ ಇಲ್ಲ. ಇದು ಸರ್ಕಾರದ ಕಣ್ಣೊರೆಸುವ ತಂತ್ರವೇ ಹೊರತು, ಇದರಲ್ಲಿ ಸರಿಯಾದ ಅಂಕಿ-ಅಂಶ ಸಿಗಲು ಸಾಧ್ಯವಿಲ್ಲ ಎಂದಿದ್ದಾರೆ.