ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಹಗರಣ: ಸಚಿವ ಕೆ.ಜೆ ಜಾರ್ಜ್ ಗೆ ಬಿಗ್ ರಿಲೀಫ್

0
Spread the love

ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ, ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹೈಕೋರ್ಟ್ ಪೀಠ,

Advertisement

ಬಿಜೆಪಿ ನಾಯಕರು ಸಲ್ಲಿಸಿದ್ದ ಪ್ರಕರಣದಲ್ಲಿ, ಸಚಿವ ಜಾರ್ಜ್ ವಿರುದ್ಧದ ದೂರು ಹೈಕೋರ್ಟ್ ರದ್ದುಪಡಿಸಿದೆ. ಈ ಆದೇಶದ ಮೂಲಕ, ಜಾರ್ಜ್ ಅವರ ಜೊತೆಗೆ ಇಂಧನ ಇಲಾಖೆಯ ಗೌರವ್ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ ಮತ್ತು ಹೆಚ್.ಜೆ. ರಮೇಶ್ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನೂ ಹೈಕೋರ್ಟ್ ರದ್ದುಪಡಿಸಿದೆ.

ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್​​ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ.

ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್‌ಡಿಎಸ್‌ಎಸ್‌ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆ ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಆದರೆ, ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.


Spread the love

LEAVE A REPLY

Please enter your comment!
Please enter your name here